ಮಕ್ಕಾ: ಮಕ್ಕಾವನ್ನು ವಿಶ್ವದರ್ಜೆಯಲ್ಲಿ ಅಭಿವೃದ್ಧಿ ಪಡಿಸಲು ಯೊಜನೆ ಸಿದ್ಧವಾಗುತ್ತಿದೆ. ಯೋಜನೆ ಪೂರ್ಣಗೊಂಡ ನಂತರ, ವಿಶ್ವದ ಅತ್ಯಂತ ಸುಂದರ ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವುದು ಉದ್ದೇಶವಾಗಿದೆ. ಈ ಉದ್ದೇಶಕ್ಕಾಗಿ ವಿವಿಧ ಅಧಿಕಾರಿಗಳನ್ನು ಸೇರಿಸಿ ಸಮಿತಿಯನ್ನು ರಚಿಸಲಾಗಿದೆ.
ಮಕ್ಕಾ ನಗರವನ್ನು ಸುಂದರಗೊಳಿಸುವ ಅಭಿವೃದ್ದಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಮಕ್ಕಾದ ಮೇಯರ್ ಈ ಬಗ್ಗೆ ತೀರ್ಮಾನವನ್ನು ತಿಳಿಸಿದ್ದಾರೆ. ಈ ಉದ್ದೇಶಕ್ಕಾಗಿ, ಮಕ್ಕಾ ಮುನಿಸಿಪಾಲಿಟಿ ಅಧೀನದ ಹಲವಾರು ಇಲಾಖೆಗಳ ಅಧಿಕಾರಿಗಳು ಮತ್ತು ವಿವಿಧ ಬ್ರಾಂಚ್ ಅಧಿಕಾರಿಗಳನ್ನು ಸೇರಿಸಿ ಸಮಿತಿಯನ್ನು ರಚಿಸಲಾಗಿದೆ.
ಅಭಿವೃದ್ಧಿ ಪಡಿಸಬೇಕಾದ ಸ್ಥಳಗಳನ್ನು ಸಮಿತಿಯು ಗುರುತಿಸಲಿದೆ. ಬೀದಿಬದಿಯ ಗೋಡೆಗಳ ಮೇಲೆ ಚಿತ್ರಗಳು ಮತ್ತು ರೇಖಾಚಿತ್ರಗಳನ್ನು ರಚಿಸಲಾಗುತ್ತದೆ. ಯೋಜನೆಯ ಭಾಗವಾಗಿ ನಗರದ ಪ್ರಮುಖ ಕೇಂದ್ರಗಳಲ್ಲಿ ವಿವಿಧ ಆಲಂಕಾರಿಕ ಸ್ಥಂಬಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ. ಇದಕ್ಕಾಗಿ ರೂಪೀಕರಿಸಲಾದ ಸಮಿತಿಯು ಪ್ರತೀ ತಿಂಗಳು ಸಭೆ ಸೇರಲು ನಿರ್ಧರಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು