ರಿಯಾದ್: ಭಾರತದೊಂದಿಗಿನ ಸಹಭಾಗಿತ್ವವನ್ನು ಬಲಪಡಿಸುವ ಸಲುವಾಗಿ ಸೌದಿ-ಇಂಡಿಯಾ ಸುಪ್ರೀಂ ಕೋಆರ್ಡಿನೇಶನ್ ಕೌನ್ಸಿಲ್ ಅನ್ನು ರೂಪಿಸಲು ಸೌದಿ-ಕ್ಯಾಬಿನೆಟ್ ಸಭೆಯು ನಿರ್ಧರಿಸಿದೆ. ಈ ತಿಂಗಳ ಹತ್ತೊಂಬತ್ತಕ್ಕೆ ಭಾರತಕ್ಕೆ ಭೇಟಿ ನೀಡುವ ಮುಹಮ್ಮದ್ ಬಿನ್ ಸಲ್ಮಾನ್ ರಾಜಕುಮಾರರ ಉಪಸ್ಥಿತಿಯಲ್ಲಿ ಈ ಬಗ್ಗೆ ಸಹಿ ಹಾಕಲಾಗುವುದು.
ಭಾರತವು ಸೌದಿ ಅರೇಬಿಯಾದ ನಾಲ್ಕನೇ ಅತಿ ದೊಡ್ಡ ವ್ಯಾಪಾರಿ ಪಾಲುದಾರ ದೇಶವಾಗಿದೆ. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಉದ್ಯಮ, ಆರ್ಥಿಕ, ಮಿಲಿಟರಿ ಮತ್ತು ಭದ್ರತೆ ವಲಯದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ನರೇಂದ್ರ ಮೋದಿಯವರ ಭೇಟಿ ವೇಳೆಯಲ್ಲಿ ಹಲವಾರು ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.
ಸುಪ್ರೀಂ ಕೋಆರ್ಡಿನೇಷನ್ ಕೌನ್ಸಿಲ್‌ನ ರಚನೆಯು ಒಪ್ಪಂದಗಳ ಸಕ್ರಿಯ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಉದ್ದೇಶಗಳನ್ನು ಪೂರೈಸಲು ಸಹಾಯ ಮಾಡಲಿದೆ. ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಸೌದಿ ಬ್ರಾಡ್ಕಾಸ್ಟಿಂಗ್ ಅಥಾರಿಟಿಯು ಟೆಲಿವಿಷನ್ ಬ್ರಾಡ್ಕಾಸ್ಟಿಂಗ್ಗೆ ಸಹಕಾರ ಒದಗಿಸಲಿವೆ.
ವ್ಯಾಪಾರ, ಶಕ್ತಿ, ಹೂಡಿಕೆ ಮತ್ತು ಪ್ರವಾಸೋದ್ಯಮ ವಲಯಕ್ಕೆ ಸಂಬಂಧಿಸಿದಂತೆ ವಿವಿಧ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ. ಈ ತಿಂಗಳು 19 ಮತ್ತು 20 ರಂದು ಸೌದಿ ರಾಜಕುಮಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮಂತ್ರಿಗಳು, ಹಿರಿಯ ಅಧಿಕಾರಿಗಳು ಮತ್ತು ಉದ್ಯಮಿಗಳು ಅವರನ್ನು ಅನುಗಮಿಸಲಿದ್ದು, ಮುಹಮ್ಮದ್ ಬಿನ್ ಸಲ್ಮಾನ್ ಪ್ರಥಮ ಬಾರಿಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ