ವಿಜಯನಗರ: ವಿಧ್ವಂಸಕ ಕೃತ್ಯ ನಡೆಸುವವರಿಗೆ ಯಾವುದೇ ಧರ್ಮವಿಲ್ಲ, ದುಷ್ಕೃತ್ಯವೇ ಅವರಿಗೆ ಧರ್ಮ. ಯಾರೇ ವಿವಾದಾತ್ಮಕ ಹೇಳಿಕೆ ನೀಡಿದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ.
ಭಗವಾನ್, ಅನಂತ್ ಕುಮಾರ್ ಹೆಗಡೆ, ಪ್ರತಾಪ್ ಸಿಂಹ ಸಹಿತ ಯಾರೇ ವಿವಾದಾತ್ಮಕ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿದರೂ ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ರಾಜ್ಯ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.ವಿಜಯನಗರದಲ್ಲಿ ಮಾತನಾಡಿದ ಎಂ.ಬಿ.ಪಾಟೀಲ್, ಜಮ್ಮು ಕಾಶ್ಮೀರ ಪುಲ್ವಾಮಾದಲ್ಲಿ ಭಾರತೀಯ ಸಿಆರ್ ಪಿಎಫ್ ಯೋಧರ ಮೇಲಿನ ದಾಳಿಯನ್ನು ಬೆಂಬಲಿಸಿದ ಕಾಶ್ಮೀರ ಮೂಲದ ಯುವಕನ ವಿಚಾರಣೆ ನಡೆಸಲಾಗುತ್ತದೆ ಎಂದರು.
ಪುಲ್ವಾಮಾದ ದಾಳಿಗೆ ಕಾರಣನಾದ ಉಗ್ರನನ್ನು ಬೆಂಬಲಿಸಿ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿಕೊಂಡಿದ್ದ ಎಂಜಿನಿಯರ್ ವಿದ್ಯಾರ್ಥಿ ತಾಹೀರ್ ಲತಿಫ್ (23) ಎಂಬಾತನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ.
ಜಮ್ಮು–ಕಾಶ್ಮೀರದ ಬಾರಾಮುಲಾ ಜಿಲ್ಲೆಯ ನಿವಾಸಿ ತಾಹೀರ್, ನಗರದ ಕಟ್ಟಿಗೇನಹಳ್ಳಿಯ ರೇವಾ ಯೂನಿವರ್ಸಿಟಿಯ ವಿದ್ಯಾರ್ಥಿ. ಸಿವಿಲ್ ಎಂಜಿನಿಯರಿಂಗ್ ವಿಭಾಗದ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ.
‘ತಾಹೀರ್ ವಿರುದ್ಧ ಯೂನಿವರ್ಸಿಟಿಯ ವಿದ್ಯಾರ್ಥಿಗಳು ದೂರು ನೀಡಿದ್ದರು. ಅಪರಾಧ ಸಂಚು, ದೇಶದ್ರೋಹ ಹಾಗೂ ಧರ್ಮ, ಜಾತಿ ಹೆಸರಿನಲ್ಲಿ ದ್ವೇಷ ಸೃಷ್ಟಿಸಲು ಯತ್ನ ಆರೋಪದಡಿ ಎಫ್ಐಆರ್ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
ಉಗ್ರನಿಗೆ ಸೆಲ್ಯೂಟ್ ಎಂದಿದ್ದ: ‘ದಾಳಿಗೂ ಮುನ್ನ ಉಗ್ರ ಚಿತ್ರೀಕರಿಸಿಕೊಂಡಿದ್ದ ವಿಡಿಯೊವನ್ನು ತನ್ನ ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಹಾಕಿಕೊಂಡಿದ್ದ ತಾಹೀರ್, ‘ಬಿಗ್ ಸೆಲ್ಯೂಟ್. ನಿನ್ನ ತ್ಯಾಗವನ್ನು ಅಲ್ಹಾಹ್ ಒಪ್ಪಿಕೊಳ್ಳುತ್ತಾನೆ. ನಿನಗೆ ದೊಡ್ಡ ಸ್ಥಾನವನ್ನೇ ಕೊಡುತ್ತಾನೆ #ಶಾಹೀದ್ ಆದಿಲ್ ಬಾಯ್ (ಉಗ್ರನ ಹೆಸರು)’ ಎಂದು ಬರೆದುಕೊಂಡಿದ್ದ’ ಎಂದು ಪೊಲೀಸರು ತಿಳಿಸಿದರು.
‘ಆರೋಪಿಯ ಸ್ಟೇಟಸ್ ನೋಡಿದ್ದ ವಿದ್ಯಾರ್ಥಿಗಳು, ‘ಭಾರತದ ಪ್ರಜೆಯಾದ ತಾಹೀರ್, ಉಗ್ರನ ಪರ ಕಾಮೆಂಟ್ ಮಾಡಿದ್ದಾನೆ. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಧರ್ಮಗಳ ನಡುವೆ ವಿಷಬೀಜ ಬಿತ್ತುವ ಕೃತ್ಯ ಎಸಗಿದ್ದಾನೆ. ದೇಶದ ಸಮಗ್ರತೆಗೆ ಧಕ್ಕೆ ಬರುವಂಥ ಕಾಮೆಂಟ್ ಮಾಡಿ ದೇಶದ್ರೋಹ ಎಸಗಿದ್ದಾನೆ’ ಎಂದು ದೂರು ನೀಡಿದ್ದರು’ ಎಂದು ಪೊಲೀಸರು ಹೇಳಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ