ಶಿರಸಿ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮನೆಯ ಸ್ಥಿರ ದೂರವಾಣಿಗೆ ಶುಕ್ರವಾರ ರಾತ್ರಿ ಜೀವ ಬೆದರಿಕೆ ಕರೆ ಬಂದಿದೆ. ರಾತ್ರಿ 1.45ರ ಸುಮಾರಿಗೆ ಸಚಿವರ ಮನೆ ಸ್ಥಿರ ದೂರವಾಣಿಗೆ 0022330000 ಈ ನಂಬರ್ನಿಂದ ಅನಾಮಿಕ ಕರೆ ಬಂದಿದೆ.
‘ನಿಮ್ಮ ಪಾಡಿಗೆ ನಿಮ್ಮ ಕೆಲಸ ಮಾಡಿಕೊಂಡು ಇರಬೇಕು. ಮುಸ್ಲಿಮರ ಬಗ್ಗೆ ಮಾತನಾಡಿದರೆ ನಿಮ್ಮನ್ನು, ನಿಮ್ಮ ಕುಟುಂಬವನ್ನು ಬಿಡುವುದಿಲ್ಲ. ಜೀವ ತೆಗಯುತ್ತೇವೆ. ಅಯೋಧ್ಯೆಯು ನಿಮಗೆ ಬೇಕಾ? ಅದನ್ನು ಬಿಡುವುದಿಲ್ಲ. ನಿಮ್ಮ ಜೀವ ತೆಗೆಯುತ್ತೇವೆ’ ಎಂದು ಕರೆ ಮಾಡಿದವರು ಹೇಳಿದ್ದಾರೆ.
ಸಚಿವರು ಹುತಾತ್ಮ ಯೋಧರಿಗೆ ನಮನ ಸಲ್ಲಿಸಲು ಹೋಗಿದ್ದರು. ಹೀಗಾಗಿ ಅವರ ಪತ್ನಿ ರೂಪಾ ಹೆಗಡೆ ಕರೆ ಸ್ವೀಕರಿಸಿದ್ದರು. ಕರೆ ಮಾಡಿದವರು ಅವಾಚ್ಯ ಶಬ್ದಗಳಿಂದ ಬೈಯತೊಡಗಿದಾಗ ರೂಪಾ ಹೆಗಡೆ ಫೋನ್ ಕಟ್ ಮಾಡಿದ್ದಾರೆ. ನಂತರ ಹಲವು ಬಾರಿ ಕರೆ ಇದೇ ಸಂಖ್ಯೆಯಿಂದ ಕರೆಗಳು ಬಂದಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಸಚಿವರ ಆಪ್ತ ಸಹಾಯಕ ಸುರೇಶ ಶೆಟ್ಟಿ ಭಾನುವಾರ ತಡರಾತ್ರಿ ಪ್ರಕರಣ ದಾಖಲಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ