ಇಸ್ಲಾಮಾಬಾದ್: ಭಾರತದ ಪೈಲಟ್ ಅಭಿನಂದನ್ ಅವರು ಶುಕ್ರವಾರ ಅಧಿಕೃತವಾಗಿ ಬಿಡುಗಡೆಯಾಗಲಿದ್ದಾರೆ.
ಪಾಕಿಸ್ತಾನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಇಮ್ರಾನ್ ಖಾನ್ ಅವರು ಉಭಯ ದೇಶಗಳ ನಡುವಿನ ದ್ವಿಪಕ್ಷಿಯ ಬಾಂಧವ್ಯವನ್ನು ವೃದ್ದಿಸಲು ಮತ್ತು ಶಾಂತಿಯ ಸಂಕೇತವಾಗಿ ಫೈಲಟ್ ಅಭಿನಂದನ್ ಅವರನ್ನು ಬಿಡುಗಡೆ ಮಾಡುವುದಾಗಿ ಅವರು ಹೇಳಿದರು.
ಪಾಕಿಸ್ತಾನದ ಈ ನಡೆಯಿಂದಾಗಿ ಉಭಯ ದೇಶಗಳನ್ನು ನಡುವೆ ಉಂಟಾಗಿದ್ದ ಬಿಗುವಿನ ವಾತಾವರಣ ತಿಳಿಯಾಗುವ ಸಾಧ್ಯತೆಗಳಿವೆ.
ಬುಧವಾರ ಪಾಕ್ ವಾಯುಸೇನೆ ಜೊತೆಗಿನ ಹೋರಾಟದಲ್ಲಿ ಮಿಗ್ ವಿಮಾನ ಪತನಗೊಂಡಿತ್ತು. ಈ ವಿಮಾನದಲ್ಲಿ ಅಭಿನಂದನ್ ಪ್ಯಾರಾಚೂಟ್ ಸಹಾಯದಿಂದ ನೆಲಕ್ಕೆ ಧುಮುಕಿದ್ದರು.
ಪಾಕ್ ಆಕ್ರಮಿತ ಕಾಶ್ಮೀರದ ಪ್ರದೇಶದಲ್ಲಿ ಬಿದ್ದಿದ್ದ ಅಭಿನಂದನ್ ಅವರನ್ನು ಪಾಕ್ ಸೇನೆ ಕಸ್ಟಡಿಗೆ ತೆಗೆದುಕೊಂಡಿತ್ತು. ಜಿನೀವಾ ಒಪ್ಪಂದ ಪ್ರಕಾರ ಪಾಕ್ ಸೇನೆ ಅಭಿನಂದನ್ ಅವರನ್ನು ಬಿಡುಗಡೆ ಮಾಡಲೇಬೇಕಿತ್ತು. ಹೀಗಾಗಿ ಪಾಕಿಸ್ತಾನ ಶುಕ್ರವಾರ ಅಭಿನಂದನ್ ಅವರನ್ನು ಬಿಡುಗಡೆ ಮಾಡಲಿದೆ.
ಏನಿದು ಜಿನೀವಾ ಒಪ್ಪಂದ..?
ಎರಡನೇ ಮಹಾಯುದ್ಧದ ಬಳಿಕ 1949ರಲ್ಲಿ 196 ದೇಶಗಳ ನಡುವೆ ಏರ್ಪಟ್ಟ ವೇಳೆ ಒಪ್ಪಂದ ನಡೆದಿತ್ತು. ಈ ಒಪ್ಪಂದ ಪ್ರಕಾರ ಯುದ್ಧ ಕೈದಿಗಳನ್ನು ಮಾನವೀಯವಾಗಿ ನಡೆಸಿಕೊಳ್ಳಬೇಕು. ಗಾಯಗೊಂಡ, ಅನಾರೋಗ್ಯಕ್ಕೆ ತುತ್ತಾದ ಯುದ್ಧ ಕೈದಿಗಳಿಗೆ ಚಿಕಿತ್ಸೆ ನೀಡಬೇಕು. ಜಿನೀವಾ ಒಪ್ಪಂದ ಆರ್ಟಿಕಲ್ 3 ಅಘೋಷಿತ ಯುದ್ಧಕ್ಕೆ ಸಂಬಂಧಿಸಿದ್ದಾಗಿದೆ. ಯುದ್ಧ ಕೈದಿಯ ಕೊಲೆ, ಹಲ್ಲೆ, ಶಿರಚ್ಛೇದ, ಒತ್ತೆಯಂತಹ ಕೃತ್ಯಗಳನ್ನು ಮಾಡಬಾರದು. ಕಾನೂನು ಪ್ರಕ್ರಿಯೆಗಳನ್ನು ಮಾಡದೇ, ಆರೋಪ ಸಾಬೀತಾಗದೇ ಶಿಕ್ಷೆ ನೀಡಬಾರದು. ಆರೋಪ ಸಾಬೀತಾಗದೇ ಇದ್ದಲ್ಲಿ ಯುದ್ಧ ಕೈದಿಯನ್ನು ಅವರ ದೇಶಕ್ಕೆ ಒಪ್ಪಿಸಬೇಕು ಎಂಬ ನಿಯಮಗಳನ್ನು ರೂಪಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ