ಕರಾಚಿ: ಭಾರತ ಪಾಕ್ ಮೇಲೆ ಬಾಂಬ್ ಹಾಕುವ ಮೂಲಕ ಮರ-ಗಿಡ ಹಾಗೂ ಪ್ರಾಣಿಗಳನ್ನು ಜೀವಕ್ಕೆ ಸಂಚಕಾರ ತಂದಿದೆ. ಈ ಮೂಲಕ ಭಾರತ ಪಾಕ್ ಮೇಲೆ ‘ನೈಸರ್ಗಿಕ ಭಯೋತ್ಪಾದನೆ’ ಎಸಗಿದೆ ಎಂದು ಪಾಕಿಸ್ತಾನ ಪ್ರಧಾನ ಮಂತ್ರಿ ಹವಾಮಾನ ಬದಲಾವಣೆ ಸಲಹೆಗಾರ ಮಲ್ಲಿಕ್ ಅಮೀನ್ ಅಸ್ಲಮ್ ವಿಶ್ವಸಂಸ್ಥೆಯಲ್ಲಿ ಭಾರತದ ವಿರುದ್ಧ ದೂರು ದಾಖಲಿಸಿದ್ದಾರೆ.
ಇತ್ತೀಚೆಗೆ ಭಾರತ ಪಾಕ್ ನೆಲದಲ್ಲಿ ನಡೆಸಿದ ವಾಯು ದಾಳಿಯಿಂದಾಗಿ ಲಕ್ಷಾಂತರ ಮರಗಳು ಹಾನಿಗೊಳಗಾಗಿವೆ ಎಂದು ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.ಭಾರತ ನಡೆಸಿದ ಈ ವಾಯು ದಾಳಿಯಿಂದಾಗಿ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಿದೆ. ಮರ ಹಾಗೂ ಪ್ರಾಣಿ-ಪಕ್ಷಿಗಳು ನಾಶವಾಗಿವೆ. ಇದು ನಿಸರ್ಗದ ಮೇಲೆ ನಡೆಸಿದ ಭಯೋತ್ಪಾದನೆ ಎಂದು ಅಸ್ಲಮ್ ದೂರಿದ್ದಾರೆ.
ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಪತ್ರಕರ್ತರು ಭಾರತ ದಾಳಿ ನಡೆಸಿದ ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದಾರೆ ಮತ್ತು ಅಲ್ಲಿ ಲಕ್ಷಾಂತರ ಮರಗಳಿಗೆ ಹಾಗೂ ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗಿರುವುದನ್ನು ಕಣ್ಣಾರೆ ಕಂಡಿದ್ದಾರೆ ಎಂದು ಅವರು ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ