ಜಮ್ಮು: ನಿಷೇಧಿತ ಜಮಾತ್–ಇ–ಇಸ್ಲಾಮಿ ಸಂಘಟನೆಯನ್ನು ಬೆಂಬಲಿಸಿದರೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಬಂಧಿಸಬೇಕು ಎಂದು ಬಿಜೆಪಿ ನಾಯಕ ಕವೀಂದರ್ ಗುಪ್ತಾ ಹೇಳಿಕೆ ನೀಡಿದ್ದಾರೆ.
ಕಣಿವೆ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಯೂ ಆಗಿರುವ ಗುಪ್ತಾ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ‘ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದ ಕಾರಣ ಬಾಂಗ್ಲಾದೇಶ, ಅಫ್ಘಾನಿಸ್ತಾನ ಹಾಗೂ ಇನ್ನೂ ಕೆಲವು ದೇಶಗಳಲ್ಲಿ ಮದರಸಗಳನ್ನು ಮುಚ್ಚಲಾಗಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆಯನ್ನು ಹರಡಲು ಸಹಕರಿಸಿದರೆ ಇಲ್ಲಿಯೂ ಮದರಸಗಳನ್ನ ನಿಷೇಧಿಸಲಾಗುವುದು. ಒಂದು ವೇಳೆ ಮೆಹಬೂಬಾ ಅವರು ಜಮಾತ್–ಇ–ಇಸ್ಲಾಮಿ ಸಂಘಟನೆ ಬೆಂಬಲಿಸಿದರೆ, ಅವರನ್ನೂ ಬಂಧಿಸಲೇಬೇಕು’ ಎಂದಿದ್ದರು.
ಈ ಹೇಳಿಕೆಯನ್ನು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಖಂಡಿಸಿದ್ದಾರೆ. ಮದರಸ ವಿಚಾರವಾಗಿ ಗುಪ್ತಾ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ, ‘ಆರ್ಎಸ್ಎಸ್ ಶಾಖೆಗಳೂ ಗುಪ್ತಾ ಅವರಂತಹ ಕೆಟ್ಟ ಬುದ್ಧಿಯ ದೊಡ್ಡ ಮನುಷ್ಯರನ್ನು ಸೃಷ್ಟಿಸುತ್ತಿವೆ’ ಎಂದು ಕಿಡಿಕಾರಿದ್ದಾರೆ.
ಜಮಾತ್ ಸಂಘಟನೆಯು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ಆರೋಪದ ಮೇಲೆ ಕೇಂದ್ರ ಸರ್ಕಾರವು ಐದು ವರ್ಷಗಳ ಅವಧಿಗೆ ನಿಷೇಧಿಸಿತ್ತು. ಈ ನಿರ್ಧಾರವನ್ನು ಇಲ್ಲಿನ ಪ್ರಮುಖ ರಾಜಕೀಯ ಪಕ್ಷಗಳಾದ ಪಿಡಿಪಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ವಿರೋಧಿಸಿದ್ದವು.
ಫೆಬ್ರುವರಿ 28ರಂದು ಕೈಗೊಂಡ ತನ್ನ ನಿರ್ಧಾರವನ್ನು ಕೇಂದ್ರ ಸರ್ಕಾರವು ಇನ್ನೊಮ್ಮೆ ಪರಿಶೀಲಿಸಬೇಕು ಎಂದು ಒಮರ್ ಅಬ್ದುಲ್ಲಾ ಮನವಿಮಾಡಿಕೊಂಡಿದ್ದರು. ಜಮಾತ್ ಸಂಘಟನೆಯನ್ನು ನಿಷೇಧಿಸಿರುವುದರಿಂದ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮೆಹಬೂಬಾ ಎಚ್ಚರಿಕೆ ನೀಡಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ