ನವದೆಹಲಿ: ಈಚೆಗೆ ಸೋರಿಕೆಯಾದ ಗೋಪ್ಯ ದಾಖಲೆಗಳನ್ನು ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ತೀರ್ಪಿನ ಮರುಪರಿಶೀಲನೆ ವೇಳೆ ಪರಿಗಣಿಸಬೇಕೇ ಎಂಬ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ.
ದಾಖಲೆಗಳನ್ನು ಪರಿಗಣಿಸುವುದಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿ ಮೊದಲು ನಿರ್ಧಾರ ಕೈಗೊಳ್ಳಲಾಗುವುದು. ನಂತರ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಹೇಳಿದೆ.
ತೀರ್ಪು ಮರುಪರಿಶೀಲಿಸುವಂತೆ ಮಾಜಿ ಕೇಂದ್ರ ಸಚಿವರಾದ ಯಶವಂತ್ ಸಿನ್ಹಾ, ಅರುಣ್ ಶೌರಿ ಹಾಗೂ ವಕೀಲ ಪ್ರಶಾಂತ್ ಭೂಷಣ್ ಅವರು, ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.
‘ಇವರು ಸಲ್ಲಿಸಿರುವ ದಾಖಲೆಗಳಲ್ಲಿ, ರಫೇಲ್ ಯುದ್ಧವಿಮಾನಗಳ ಯುದ್ಧ ಸಾಮರ್ಥ್ಯ ಕುರಿತ ವಿವರಗಳಿವೆ. ಸಾರ್ವಜನಿಕವಾಗಿ ಲಭ್ಯವಾಗುತ್ತಿರುವ ಈ ದಾಖಲೆಗಳು ಶತ್ರುಗಳಿಗೆ ದೊರಕುವ ಅಪಾಯ ಇದೆ’ ಎಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗಿರುವ ಅಫಿಡವಿಟ್ನಲ್ಲಿ ಕೇಂದ್ರ ಸರ್ಕಾರ ಉಲ್ಲೇಖಿಸಿತ್ತು.
ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ಗೋಪ್ಯ ದಾಖಲೆಗಳು ಕಳವಾಗಿವೆ. ಇವುಗಳನ್ನು ಮರುಪರಿಶೀಲನಾ ಅರ್ಜಿ ಜತೆ ಪರಿಗಣಿಸಬಾರದು ಎಂದು ಈಚೆಗೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು. ಬಳಿಕ, ದಾಖಲೆಗಳು ಕಳವಾಗಿಲ್ಲ. ನಕಲು ಮಾಡಲಾಗಿದೆ ಎಂದು ಹೇಳಿತ್ತು















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ