ದೆಹಲಿ: ವಿದ್ಯುನ್ಮಾನ ಮತ ಯಂತ್ರಗಳ ದುರ್ಬಳಕೆ ಮಾಡದಂತೆ ಆದೇಶ ಹೊರಡಿಸಬೇಕು ಎಂದು ಸುಮಾರು 21 ಪಕ್ಷಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ವಿಚಾರಣೆಗೆ ಬರಲಿದೆ.
ಮತ ಯಂತ್ರಗಳ ದುರ್ಬಳಕೆಯಾಗದಂತೆ ಸುರಕ್ಷತಾ ನಿಯಮಗಳನ್ನು ಅಳವಡಿಸಬೇಕು ಎಂದು ಈ ಪಕ್ಷಗಳು ಅರ್ಜಿಯಲ್ಲಿ ಮನವಿ ಮಾಡಿಕೊಂಡಿವೆ. ಅಲ್ಲದೆ ಶೇ.50ರಷ್ಟು ಮತ್ತು ಮತ ಯಂತ್ರಗಳಿಗೂ ಹೋಲಿಕೆಯಾಗಬೇಕು ಎಂದೂ ಆಗ್ರಹಪಡಿಸಿವೆ. ಕಾಂಗ್ರೆಸ್, ತೆಲುಗು ದೇಶಂ, ಎನ್‌ಸಿಪಿ, ಎಎಪಿ, ಸಿಪಿಐಎಂ, ಟಿಎಂಸಿ, ಸಿಪಿಐ, ಎನ್‌ಸಿ, ಎಸ್‌ಪಿ, ಆರ್‌ಎಲ್‌ಡಿ, ಎಲ್‌ಜೆಡಿ ಡಿಎಂಕೆ ಸೇರಿದಂತೆ 21 ಪಕ್ಷಗಳು ನ್ಯಾಯಾಲಯದ ಮೆಟ್ಟಿಲೇರಿವೆ. ಫೆಬ್ರವರಿಯಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇವಿಎಂಗಳ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದರು.
ಕಳೆದ ಎರಡು ವರ್ಷಗಳಲ್ಲಿ ಕಾಂಗ್ರೆಸ್ ಸೇರಿದಂತೆ ಬಹುತೇಕ ಪ್ರತಿಪಕ್ಷಗಳು ಮತ ಯಂತ್ರಗಳ ಕಾರ್ಯವೈಖರಿ ಕುರಿತು ಸಂಶಯ ಆದರೆ ಚುನಾವಣಾ ಆಯೋಗ ಈ ಆರೋಪಗಳನ್ನು ನಿರಾಕರಿಸಿ ಯಾವುದೇ ಕಾರಣಕ್ಕೂ ಮತಯಂತ್ರಗಳ ದುರ್ಬಳಕೆ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿತ್ತು. ಜನವರಿ 24ರಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಆರೋರಾ ದೇಶ, ಮತ್ತೆ ಮತಪತ್ರಗಳ ಮೊರೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ಹೆಚ್ಚು ಸುರಕ್ಷಾ ನಿಯಮ ಪಾಲನೆ ಮತ್ತು ಇವಿಎಂ ಬಳಕೆ ವೇಳೆ ಕಟ್ಟುನಿಟ್ಟಾದ ಮಾನದಂಡ ಬಳಕೆ ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ವಿವಿಪ್ಯಾಟ್(ಪೇರ್ಪ) ಹಾಗೂ ಇವಿಎಂನಲ್ಲಿ ಆದ ಮತದಾನದ ಪರೀಕ್ಷೆ ಮಾಡಬೇಕು ಎಂದು ಕೋರಿರುವ 21 ಪಕ್ಷಗಳು, ಶೇ 50ರಷ್ಟು ವಿವಿಪ್ಯಾಟ್ಗಳನ್ನ ಪರೀಕ್ಷೆ ಮಾಡಿದ ಬಳಿಕವೇ ಫಲಿತಾಂಶ ಘೋಷಣೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಪಟ್ಟು ಹಿಡಿದಿವೆ.
ಕಾಂಗ್ರೆಸ್, ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಾರ್ಟಿ, ಶರದ್ ಪರ್ವಾ ನೇತೃತ್ವದ ಎನ್ಸಿಪಿ, ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಾರ್ಟಿ, ಎಡರಂಗ, ಸಮಾಜವಾದಿ ಪಕ್ಷ ಹಾಗೂ ಮಾಯಾವತಿ ಅವರ ಬಿಎಸ್ಪಿ ಈ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಳ್ಳುವ ಸುಪ್ರೀಂಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ