ಕುವೈಟ್ ಸಿಟಿ: ಕುವೈತ್ ಏರ್ಪೋರ್ಟ್ ನಲ್ಲಿ ಪ್ಯಾಸೆಂಜರ್ ಸೇವಾ ಶುಲ್ಕವಾಗಿ 8 ಕುವೈಟ್ ದಿನಾರ್ಗಳನ್ನು ವಸೂಲಿ ಮಾಡಲಾಗುತ್ತದೆ. ಅಧಿಕ ಶುಲ್ಕವು ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ.
ಕುವೈಟ್ ಏರ್ ಪೋರ್ಟ್ ಮೂಲಕ ಪ್ರಯಾಣಿಸುವವರು 8 ಕುವೈಟ್ ದಿನಾರ್ ಹೆಚ್ಚುವರಿಯಾಗಿ ನೀಡಬೇಕಾಗುತ್ತದೆ. ಅಂತಾರಾಷ್ಟ್ರೀಯ ಪ್ರಯಾಣಿಕರಿಂದ ಏಪ್ರಿಲ್ 1 ರಿಂದ ಈ ಶುಲ್ಕವನ್ನು ಪಡೆಯಲು ನಿರ್ಧರಿಸಲಾಗಿದೆ.
ಈ ಮೊತ್ತವನ್ನು ಟಿಕೆಟ್ ಖರೀದಿಸುವ ಸಮಯದಲ್ಲಿಯೇ ಪ್ರಯಾಣಿಕರಿಂದ ಪಡೆಯಬೇಕಾಗಿದೆ ಎಂದು ಟ್ರಾವೆಲ್ ಏಜೆನ್ಸಿಗಳಿಗೆ ಆದೇಶ ನೀಡಲಾಗಿದ್ದು, 65 ವರ್ಷ ವಯಸ್ಸಿನ ವಯಸ್ಕ ನಾಗರಿಕರಿಗೆ, 2 ವರ್ಷದ ಕೆಳಗಿನ ಮಕ್ಕಳಿಗೆ , ವಿಕಲಾಂಗರಿಗೆ ಮತ್ತು ಗಡಿಪಾರು ಮಾಡಲಾಗುವವರಿಗೆ ಇದು ಅನ್ವಯಿಸುವುದಿಲ್ಲ.
ಎಮಿರೇಟ್ಸ್ ಏರ್ಲೈನ್ಸ್ ಈ ಬಗ್ಗೆ ಮಾಹಿತಿ ನೀಡಿದ್ದು, ಇತರ ಏರ್ವೇಸ್ ಕಂಪೆನಿಗಳು ಹೆಚ್ಚುವರಿ ಶುಲ್ಕವನ್ನು ಪಡೆಯುವ ಕ್ರಮಗಳನ್ನು ಶೀಘ್ರದಲ್ಲೇ ಸ್ವೀಕರಿಸಲಿದೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ