ಕ್ರೈಸ್ಟ್ ಚರ್ಚ್, ಮಾ.16-ನ್ಯೂಝಿಲೆಂಡ್ ಕ್ರೈಸ್ಟ್ ಚರ್ಚ್‌ನಲ್ಲಿ ನಿನ್ನೆ ಮಸೀದಿಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯ ಆಘಾತದಿಂದ ಹೊರ ಬರಲು ಇನ್ನೂ ಹೆಚ್ಚಿನ ಸಮಯ ಅಗತ್ಯವಿದೆ ಎಂದು ಬಾಂಗ್ಲಾದೇಶ ಹಿರಿಯ ಆಟಗಾರ ತಮೀಮ್ ಇಕ್ಬಾಲ್ ತಿಳಿಸಿದ್ದಾರೆ.
ಇಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ಈ ದುರ್ಘಟನೆಯಿಂದ ನಮ್ಮ ತಂಡದ ಆಟಗಾರರ ಕುಟುಂಬಗಳು ಆಘಾತಕ್ಕೆ ಒಳಗಾಗಿವೆ. ಹಾಗಾಗಿ, ಮೂರನೇ ಪಂದ್ಯವಾಡದೆ ತವರಿಗೆ ಮರಳುತ್ತಿರುವುದು ಉತ್ತಮ” ಎಂದು ಹೇಳಿದ್ದಾರೆ.
ಈಗಾಗಲೇ ನ್ಯೂಝಿಲೆಂಡ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಬಾಂಗ್ಲಾದೇಶ ಇಂದು ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಆಡಬೇಕಿತ್ತು. ಆದರೆ, ಶುಕ್ರವಾರ ಕ್ರೈಸ್ಟ್ ಚರ್ಚ್ ನಲ್ಲಿರುವ ಎರಡು ಮಸೀದಿಗಳಿಗೆ ದಾಳಿ ಮಾಡಿದ ಬಂದೂಕುಧಾರಿಗಲಾದ ಉಗ್ರರು ಕನಿಷ್ಠ 49 ಮಂದಿಯನ್ನು ಬಲಿ ತೆಗೆದುಕೊಂಡಿದ್ದರು.
ಬಾಂಗ್ಲಾದೇಶದ ಆಟಗಾರರು ಕೂದಲೆಳೆಯ ಅಂತರದಲ್ಲಿ ತಪ್ಪಿಸಿಕೊಂಡಿದ್ದರು. ಈ ದುರ್ಘಟನೆ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಅಂತಿಮ ಟೆಸ್ಟ್ ಪಂದ್ಯವನ್ನು ಐಸಿಸಿ ಒಪ್ಪಿಗೆ ಮೆರೆಗೆ ರದ್ದುಗೊಳಿಸಲಾಗಿದೆ. ಪ್ರವಾಸ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ತಂಡ ತವರಿಗೆ ಮರಳಿದೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ