ವೆಲ್ಲಿಂಗ್ಟನ್: ಕ್ರೈಸ್ಟ್ ಚರ್ಚ್ ನ ಮಸೀದಿಯೊಂದರ ಮೇಲೆ ಉಗ್ರವಾದಿಗಳು ನಡೆಸಿದ ಬಂದೂಕು ದಾಳಿಯಲ್ಲಿ 49 ಮಂದಿ ಬಲಿಯಾದ ಬೆನ್ನಲ್ಲೇ ನೂಜಿಲೆಂಡ್ ನಲ್ಲಿ ಬಂದೂಕು ಕಾನೂನನ್ನು ಕಠಿಣಗೊಳಿಸುತ್ತೇವೆ ಎಂದು ಪ್ರಧಾನಿ ಜೆಸಿಂಡಾ ಆರ್ಡರ್ನ್ ಹೇಳಿದ್ದಾರೆ.
ನ್ಯೂಜಿಲೆಂಡ್ ನ ರಾಷ್ಟ್ರೀಯ ಬಂದೂಕು ಕಾನೂನನ್ನು ತಿದ್ದುಪಡಿ ಮಾಡಲು ಕಿವೀಸ್ ಸರ್ಕಾರ ನಿರ್ಧರಿಸಿದ್ದು, ಆಸಿಸ್ ಮಾದರಿಯ ಬಂದೂಕು ಕಾನೂನು ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ. 1996 ದಾಳಿ ಬಳಿಕ ಆಸ್ಟ್ರೇಲಿಯಾ ಬಂದೂಕು ಕಾನೂನು ಕಠಿಣಗೊಳಿಸಿತ್ತು. ಇದೇ ಮಾದರಿಯಲ್ಲೇ ಇದೀಗ ಕಿವೀಸ್ ಸರ್ಕಾರ ಬಂದೂಕು ಕಾನೂನು ತಿದ್ದುಪಡಿಗೆ ಮುಂದಾಗಿದೆ ಎಂದು ಪ್ರಧಾನಿ ಜೆಸಿಂಡಾ ಆರ್ಡರ್ನ್ ಹೇಳಿದ್ದಾರೆ.
ಇನ್ನು ನಿನ್ನೆ ಶೂಟಿಂಗ್ ನಲ್ಲಿ 49 ಮಂದಿಯ ಜೀವ ತೆಗೆದಿದ್ದ ದಾಳಿಕೋರ ಬ್ರೆಂಟ್ಟನ್ ಟ್ಯಾರಂಟ್ 2017ರ ನವೆಂಬರ್‌ನಲ್ಲಿ ಕ್ಯಾಟಗರಿ ಎ ಬಂದೂಕು ಪರವಾನಗಿ ಪಡೆದುಕೊಂಡಿದ್ದ ಮತ್ತು ಬಂದೂಕು, ಗುಂಡುಗಳನ್ನು ಖರೀದಿಸಿ ಸಂಗ್ರಹಿಸಿಕೊಂಡಿದ್ದ. ಶುಕ್ರವಾರ ನಡೆಸಿದ ದಾಳಿಯಲ್ಲಿ ಆತ ಐದು ಶಸ್ತ್ರಾಸ್ತ್ರಗಳನ್ನು ಬಳಸಿದ್ದ. ಎರಡು ಸೆಮಿ ಆಟೋಮೆಟಿಕ್ ರೈಫಲ್ ಗಳು, ಎರಡು ಶಾಟ್‌ಗನ್‌ಗಳು ಹಾಗೂ ಲಿವರ್ ಆ್ಯಕ್ಷನ್ ಬಂದೂಕಿನೊಂದಿಗೆ ದಾಳಿ ಮಾಡಿರುವುದಾಗಿ ತಿಳಿದು ಬಂದಿದೆ.

ಇದೇ ಕಾರಣಕ್ಕೆ ನ್ಯೂಜಿಲೆಂಡ್ ಸರ್ಕಾರ ದೇಶದಲ್ಲಿ ಬಂದೂಕು ಪಡೆಯಲು ಇರುವ ಕಾನೂನು ಬಿಗಿಗೊಳಿಸಿ ಬದಲಾವಣೆ ತರಲು ನಿರ್ಧರಿಸಿದೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ