ಕೊಪ್ಪಳ: ಪ್ರೀತಿಗಾಗಿ ಪೀಠತ್ಯಾಗ ಮಾಡಿ ನಾಪತ್ತೆಯಾಗಿದ್ದ ಸ್ವಾಮೀಜಿಯೊಬ್ಬರು ಪ್ರೀತಿಸಿದ ಹುಡಗಿಯೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಬ್ಬರು ಹುಟ್ಟು ಹಬ್ಬ ಆಚರಣೆ ಮಾಡುತ್ತಿರೋ ಫೋಟೋ ವೈರಲ್ ಆಗಿದೆ.
ಜಿಲ್ಲೆಯ ಅಳವಂಡಿ ಗ್ರಾಮದ ಸಿದ್ದೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರೀತಿಗಾಗಿ ಪೀಠತ್ಯಾಗ ಮಾಡಿದ್ದರು. ಕಳೆದ ಜನವರಿಯಲ್ಲಿ ಪೀಠತ್ಯಾಗ ಮಾಡಿ ನಾಪತ್ತೆಯಾಗಿದ್ದ ಸಿದ್ದಲಿಂಗ ಸ್ವಾಮೀಜಿ ಇದೀಗ ಸಾಮಾಜಿಕ ಜಾಲತಾಣದ ಮೂಲಕ ಪತ್ತೆಯಾಗಿದ್ದಾರೆ. ಮುಂಡರಗಿ ಕಾಲೇಜಿನಲ್ಲಿ ಸ್ವಾಮೀಜಿ ಪಾಠ ಮಾಡಲು ಹೋಗುತ್ತಿದ್ದರು. ಆಗ ಕಾಲೇಜಿಗೆ ಬರುತ್ತಿದ್ದ ಹುಡಗಿಯೊಬ್ಬಳ ಮೇಲೆ ಸ್ವಾಮೀಜಿಗೆ ಪ್ರೇಮಾಂಕುರವಾಗಿದೆ. ಬಳಿಕ ಹೇಗೋ ಇಬ್ಬರ ನಡುವೆ ಪ್ರೀತಿ ಹುಟ್ಟಿ, ಕೊನೆಗೆ ಸ್ವಾಮೀಜಿ ಹುಡುಗಿಗಾಗಿ ಪೀಠವನ್ನ ತ್ಯಾಗ ಮಾಡಿ ನಾಪತ್ತೆಯಾಗಿದ್ದರು.
ಈ ಬಗ್ಗೆ ಮಠದ ಭಕ್ತರು ಹಾಗೂ ಜನರು ಪ್ರಶ್ನಿಸಿದಾಗ, ಸಿದ್ದಲಿಂಗ ಸ್ವಾಮೀಜಿಗಳು ವೈಯಕ್ತಿಕ ಕಾರಣಕ್ಕಾಗಿ ಪೀಠ ತ್ಯಾಗ ಮಾಡಿದ್ದಾರೆಂದು ಮಠದ ಆಡಳಿತ ಮಂಡಳಿ ಉತ್ತರಿಸಿ ಸುಮ್ಮನಾಗಿತ್ತು ಇದೀಗ ಮೂರು ತಿಂಗಳ ಬಳಿಕ ಸ್ವಾಮೀಜಿ ಹುಡಗಿಯೊಂದಿಗೆ ಪ್ರತ್ಯಕ್ಷವಾಗಿದ್ದಾರೆ. ಹುಡುಗಿಯೊಂದಿಗೆ ಸ್ವಾಮೀಜಿ ಹುಟ್ಟುಹಬ್ಬ ಆಚರಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು