ಬೆಂಗಳೂರು, ಮಾ.19:- ರಾಜ್ಯದ ಲೋಕಸಭಾ ಚುನಾವಣೆಗೆ ಇಂದು ಅಧಿಸೂಚನೆ ಹೊರ ಬಿದ್ದಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಏಪ್ರಿಲ್ 18 ರಂದು ಚುನಾವಣೆ ನಡೆಯಲಿದ್ದು, ಈ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದ ಚುನಾವಣಾಧಿಕಾರಿಗಳು ಇಂದು ಅಧಿಸೂಚನೆ ಹೊರಡಿಸಿದ್ದಾರೆ.
ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಅಧಿಸೂಚನೆ ಹೊರ ಬೀಳುವ ಮೂಲಕ ಈ ಎಲ್ಲ ಕ್ಷೇತ್ರಗಳಲ್ಲೂ ಇಂದಿನಿಂದಲೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ರಾಜ್ಯದ ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಈ 14 ಲೋಕಸಭಾ ಕ್ಷೇತ್ರಗಳಿಗೆ ಏ. 18 ರಂದು ನಡೆಯುವ ಚುನಾವಣೆಗೆ ಅಧಿಸೂಚನೆಯನ್ನು ಇಂದು ಆಯಾ ಜಿಲ್ಲಾಧಿಕಾರಿಗಳು ಹೊರಡಿಸಿದ್ದಾರೆ.
ಚುನಾವಣಾ ಅಧಿಸೂಚನೆ ಹೊರ ಬಿದ್ದಿರುವ ಇಂದಿನಿಂದಲೆ ಈ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಈ ತಿಂಗಳ 26ರವರೆಗೂ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳ ಪರಿಶೀಲನೆ ಮಾ. 27 ರಂದು ನಡೆಯಲಿದ್ದು, ಮಾ. 29 ನಾಮಪತ್ರ ವಾಪಸ್ಸಾತಿಗೆ ಕಡೆಯ ದಿನವಾಗಿದೆ. ಮತದಾನ ಏ. 18 ರಂದು ನಡೆಯಲಿದ್ದು, ಮತ ಎಣಿಕೆ ಮೇ 23 ರಂದು ನಡೆಯಲಿದೆ.
ಮಾ. 28 ರಂದು ಅಧಿಸೂಚನೆ
ರಾಜ್ಯದ ಉಳಿದ 14 ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, .ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಈ ಕ್ಷೇತ್ರಗಳಲ್ಲಿ ಏ. 23 ರಂದು ಚುನಾವಣೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾ. 28 ರಂದು ಅಧಿಸೂಚನೆ ಹೊರ ಬೀಳಲಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ