ಗಂಗಾವತಿ: ದೇಶದ ರಕ್ಷಣೆ, ಅಭಿವೃದ್ಧಿಯ ಜತೆಗೆ ಹಿಂದೂಧರ್ಮಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವವರನ್ನು ಪ್ರಧಾನಿಯನ್ನಾಗಿ ಮಾಡಬೇಕು ಎಂದು ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥರು ಹೇಳಿದರು.
ತಾಲೂಕಿನ ಆನೆಗೊಂದಿ ಬಳಿಯ ನವಬೃಂದಾವನ ಗಡ್ಡೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಅಥವಾ ಬೇರೆ ರಾಜ್ಯ ಆಯ್ಕೆ ಮಾಡಿಕೊಳ್ಳುವುದು ಅವರಿಗೆ ಬಿಟ್ಟ ತೀರ್ಮಾನ. ನಾವು ಯಾವುದೇ ಪಕ್ಷ ಕ್ಕೆ ಸೀಮಿತವಲ್ಲ. ಮಠದ ಭಕ್ತರು, ನಮ್ಮ ಶಿಷ್ಯ ವೃಂದ ಎಲ್ಲ ಪಕ್ಷದಲ್ಲೂ ಇದ್ದಾರೆ. ಸಲಹೆ-ಸೂಚನೆ ಕೇಳಿದ ಶಿಷ್ಯರಿಗೆ ಮಾರ್ಗದರ್ಶನ ನೀಡುತ್ತೇವೆ. ಪ್ರಧಾನಮಂತ್ರಿ ಆಯ್ಕೆ ವಿಚಾರದಲ್ಲಿ ಜನರು ದೇಶದ ಅಭಿವೃದ್ಧಿ ದೃಷ್ಟಿಯನ್ನಿಟ್ಟುಕೊಂಡು ಸೂಕ್ತ ನಾಯಕರನ್ನು ಆಯ್ಕೆ ಮಾಡಬೇಕು. ರಾಜಕೀಯ ಮಾಡುವುದು ನನಗೆ ಇಷ್ಟವಿಲ್ಲ. ಚುನಾವಣೆಯಿಂದ ನಾವು ದೂರ. ಸದ್ಯ ಹಿಂದೂ ಧರ್ಮದ ಬಗ್ಗೆ ಪ್ರಚಾರ ಮಾಡುವುದಷ್ಟೇ ನನ್ನ ಕೆಲಸ ಎಂದರು.
ವ್ಯಾಸರಾಜ ಮಠದ ಪೀಠಾಧಿಪತಿ ವಿದ್ಯಾಶ್ರೀಶ ತೀರ್ಥರು, ಪೇಜಾವರ ಮಠದ ಕಿರಿಯ ಸ್ವಾಮಿ ವಿದ್ಯಾಪ್ರಸನ್ನ ತೀರ್ಥರು ಸೇರಿ ಇತರರು ಇದ್ದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ