ಚಿಕ್ಕಬಳ್ಳಾಪುರ: ‘ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಒಕ್ಕಲಿಗರು ಎನ್ನುವ ಕಾರಣಕ್ಕೆ ಒಕ್ಕಲಿಗರು ಅವರಿಗೆ ಮತ ನೀಡಿದರೆ ಒಕ್ಕಲಿಗ ಜನಾಂಗದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮೈತ್ರಿ ಸರ್ಕಾರಕ್ಕೆ ಕುತ್ತು ಬರಲಿದೆ’ ಎಂದು ಸಂಸದ ವೀರಪ್ಪ ಮೊಯಿಲಿ ಹೇಳಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಕೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
‘ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿ ಅವರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮೈತ್ರಿ ಅಭ್ಯರ್ಥಿಗೆ ಮತ ಚಲಾಯಿಸಬೇಕು. ಜಾತಿ ನೋಡಿ ಮತ ಹಾಕಿದರೆ ಮೈತ್ರಿ ಸರ್ಕಾರ ಉಳಿಯುವುದಿಲ್ಲ’ ಎಂದು ತಿಳಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಮೊಯಿಲಿ ಅವರಿಗೆ ಸಚಿವರಾದ ಎನ್.ಎಚ್.ಶಿವಶಂಕರರೆಡ್ಡಿ, ಎಂ.ಟಿ.ಬಿ ನಾಗರಾಜ್, ಶಾಸಕರಾದ ಡಾ.ಕೆ.ಸುಧಾಕರ್, ನಿಸರ್ಗ ನಾರಾಯಣಸ್ವಾಮಿ, ವೆಂಕಟರಮಣಯ್ಯ, ಎಸ್.ಎನ್.ಸುಬ್ಬಾರೆಡ್ಡಿ ಸಾಥ್ ನೀಡಿದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ