ಕೋಲ್ಕತ್ತಾ: ರಾಹುಲ್ ಗಾಂಧಿ ‘ಹಿ ಈಸ್ ಜಸ್ಟ್ ಎ ಕಿಡ್’ ಚಿಕ್ಕ ಹುಡುಗ ಇದ್ದಂತೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ.
ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ರ್ಯಾಲಿ ನಡೆಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಮತಾ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದರು. ಇದೀಗ ರಾಹುಲ್ ಟೀಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿ-‘ಹಿ ಈಸ್ ಜಸ್ಟ್ ಎ ಕಿಡ್’, ಅದರ ಬಗ್ಗೆ ನಾನೇನೂ ಹೇಳುವುದಿಲ್ಲ ಎಂದು ಎಂದಿದ್ದಾರೆ.
ಪಶ್ಚಿಮ ಬಂಗಾಳದ ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ, ”ಒಂದು ಕಡೆ ಮೋದಿ ಜೀ ಸುಳ್ಳುಗಳನ್ನು ಹೇಳುತ್ತಿರುತ್ತಾರೆ ಹಾಗೂ ಮತ್ತೊಂದು ಕಡೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕೇವಲ ಭರವಸೆಗಳನ್ನು ನೀಡುತ್ತಿರುತ್ತಾರೆ. ಆದರೆ, ಅದ್ಯಾವುದೂ ನಡೆಯುವುದಿಲ್ಲ” ಎಂದು ರಾಹುಲ್ ಟೀಕಿಸಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ