ಸಾನ್ ಫ್ರಾನ್ಸಿಸ್ಕೊ: ನೇರ ಪ್ರಸಾರ (ಲೈವ್ ಸ್ಟ್ರೀಮಿಂಗ್) ನಿಯಮಗಳನ್ನು ಬಿಗಿಗೊಳಿಸುವುದಾಗಿ ಸಾಮಾಜಿಕ ಜಾಲತಾಣ ಕಂಪನಿ ಫೇಸ್ಬುಕ್ ಶನಿವಾರ ತಿಳಿಸಿದೆ.
ನ್ಯೂಜಿಲೆಂಡ್ನ ಕ್ರೈಸ್ಟ್ಚರ್ಚ್ ನಗರದ ಮಸೀದಿಯಲ್ಲಿ ಇತ್ತೀಚೆಗೆ ನಡೆದಿದ್ದ ಉಗ್ರ ದಾಳಿ ಫೇಸ್ಬುಕ್ ಮೂಲಕ ನೇರ ಪ್ರಸಾರವಾಗಿತ್ತು. ದಾಳಿಕೋರ ದೇಹಕ್ಕೆ ಧರಿಸಿದ ಕ್ಯಾಮರಾ ಬಳಸಿ ಘಟನೆಯನ್ನು ಫೇಸ್ಬುಕ್ ಮೂಲಕ ನೇರಪ್ರಸಾರ ಮಾಡಿದ್ದ.
‘ಘಟನೆಯ ಭೀಕರ ವಿಡಿಯೊವನ್ನು ಹಂಚಿಕೊಳ್ಳಲು ಫೇಸ್ಬುಕ್ನಂತಹ ಆನ್ಲೈನ್ ಮಾಧ್ಯಮ ಬಳಕೆಯಾಗಿದ್ದನ್ನು ಅನೇಕ ಮಂದಿ ಪ್ರಶ್ನಿಸಿದ್ದರು’ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಷೆರಿಲ್ ಸ್ಯಾಂಡ್ಬರ್ಗ್ ಆನ್ಲೈನ್ ಸಂದೇಶದಲ್ಲಿ ಬರೆದುಕೊಂಡಿದ್ದಾರೆ.
‘ಉಗ್ರ ದಾಳಿಯ ಹಿನ್ನೆಲೆಯಲ್ಲಿ ನೇರ ಪ್ರಸಾರ ನಿಯಮ ಬಿಗಿಗೊಳಿಸಲು, ನಮ್ಮ ತಾಣಗಳ ಮೂಲಕ ದ್ವೇಷ ಹರಡುವುದನ್ನು ತಡೆಯಲು ಮತ್ತು ನ್ಯೂಜಿಲೆಂಡ್ ಸಮುದಾಯಕ್ಕೆ ಬೆಂಬಲ ನೀಡಲು ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.
ನಿಯಮಗಳನ್ನು ಮೀರಿ ನೇರ ಪ್ರಸಾರ ಮಾಡಿದವರ ಖಾತೆಗಳನ್ನು ಬ್ಲಾಕ್ ಮಾಡುವ ಬಗ್ಗೆಯೂ ಫೇಸ್ಬುಕ್ ಚಿಂತನೆ ನಡೆಸುತ್ತಿದೆ. ಹಿಂಸೆಗೆ ಸಂಬಂಧಿಸಿದ ಸಂಕಲಿತ ವಿಡಿಯೊ ಮತ್ತು ಚಿತ್ರಗಳನ್ನು ಕ್ಷಿಪ್ರ ಪತ್ತೆಹಚ್ಚುವ ನಿಟ್ಟಿನಲ್ಲಿ ಸಾಫ್ಟ್ವೇರ್ ಸುಧಾರಣೆ ಮಾಡಲೂ ಹೂಡಿಕೆ ಮಾಡುತ್ತಿದೆ ಎಂದೂ ಅವರು ಹೇಳಿದ್ದಾರೆ.
ಕ್ರೈಸ್ಟ್ಚರ್ಚ್ ದಾಳಿಗೆ ಸಂಬಂಧಿಸಿ ಮೊದಲ 24 ಗಂಟೆಗಳಲ್ಲಿ ಫೇಸ್ಬುಕ್ 15 ಲಕ್ಷಕ್ಕೂ ಹೆಚ್ಚಿನ ವಿಡಿಯೊಗಳನ್ನು ತೆಗೆದುಹಾಕಿತ್ತು. ದಾಳಿಕೋರನ ಫೇಸ್ಬುಕ್, ಇನ್ಸ್ಟಾಗ್ರಾಮ್ ವೈಯಕ್ತಿಕ ಖಾತೆ ಸ್ಥಗಿತಗೊಳಿಸಿ, ಅದರಲ್ಲಿದ್ದ ವಿಡಿಯೊವನ್ನೂ ತೆಗೆದುಹಾಕಿತ್ತು. ಆದರೂ ಫೇಸ್ಬುಕ್ ವಿರುದ್ಧ ಜಾಗತಿಕ ಮಟ್ಟದಲ್ಲಿ ತೀವ್ರ ಟೀಕೆ ವ್ಯಕ್ತವಾಗಿತ್ತು. ದಾಳಿಯಲ್ಲಿ ಏಳು ಭಾರತೀಯರು ಸೇರಿ ಸುಮಾರು 50 ಮಂದಿ ಮೃತಪಟ್ಟಿದ್ದರು.















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ