ಬೆಂಗಳೂರು (ಏ.8): ನಿವೃತ್ತ ಐಪಿಎಸ್ ಅಧಿಕಾರಿ ಮತ್ತು ಮಾಜಿ ಸಂಸದ ಎಚ್.ಟಿ. ಸಾಂಗ್ಲಿಯಾನ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಒಂದೂ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೇಸರಗೊಂಡು ಕಾಂಗ್ರೆಸ್ಗೆ ರಾಜೀನಾಮೆ ನೀಡುತ್ತಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ನಿಂದ ಸಂಸದರಾಗಿಯೂ ಆಯ್ಕೆಯಾಗಿದ್ದ ಸಾಂಗ್ಲಿಯಾನ ಐಪಿಎಸ್ ಅಧಿಕಾರಿಯಾಗಿದ್ದಾಗಲೂ ತಮ್ಮ ಕಾರ್ಯಕ್ಷಮತೆಯಿಂದ ಹೆಸರಾಗಿದ್ದವರು. ಲೋಕಸಭಾ ಚುನಾವಣೆಯಲ್ಲಿ ಕ್ರೈಸ್ತ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬೇಸರಗೊಂಡು ಮಾಜಿ ಸಂಸದ ಎಚ್.ಟಿ. ಸಾಂಗ್ಲಿಯಾನ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿ ಚುನಾವಣೆ ಪ್ರಚಾರ ಸೇರಿದಂತೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಂದೂ ಕ್ಷೇತ್ರವನ್ನು ಕ್ರೈಸ್ತ ಸಮುದಾಯಕ್ಕೆ ಬಿಟ್ಟುಕೊಡದೆ ಕಾಂಗ್ರೆಸ್ ನಾಯಕರು ಕಡೆಗಣಿಸಿದ್ದಾರೆ. ಕಾಂಗ್ರೆಸ್ ನಾಯಕರು ಕ್ರೈಸ್ತ ಸಮುದಾಯದ ಹಿತ ಕಾಪಾಡುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಈ ಬಾರಿ ಬೆಂಗಳೂರು ಉತ್ತರ ಅಥವಾ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಎಚ್.ಟಿ. ಸಾಂಗ್ಲಿಯಾನ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದ್ದ ಅವರು ಪಕ್ಷ ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರನಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದಿದ್ದರು. ಆದರೆ ಅವರು ನಾಮಪತ್ರ ಸಲ್ಲಿಸದೆ ಹಿಂದೆ ಸರಿದಿದ್ದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ