ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಪೀಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಕಾರಣ ಕೆಲ ಹೊತ್ತು ಆತಂಕದ ಸ್ಥಿತಿ ಉಂಟಾಗಿತ್ತು. ಮುಖ್ಯಮಂತ್ರಿ ಅಪಾಯದಿಂದ ಪಾರಾಗಿದ್ದಾರೆ.
ಕುಮಾರಸ್ವಾಮಿ ರಾತ್ರಿ ಪ್ರಚಾರ ಮುಗಿಸಿ ಕೆಆರ್ಎಸ್ನ ಖಾಸಗಿ ಹೋಟೆಲ್ ನಲ್ಲಿ ತಂಗಲು ತೆರಳುತ್ತಿದ್ದಾಗ ತಮ್ಮ ರೇಂಜ್ ರೋವರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಎಂಜಿನ್ ಬಿಸಿಯಾಗಿದ್ದು ಹೊಗೆ ಕಾಣಿಸಿಕೊಂಡು ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಭದ್ರತಾ ಸಿಬ್ಬಂದಿ ಮುಖ್ಯಮಂತ್ರಿಯನ್ನು ಕೆಳಗಿಳಿಸಿ ಬೇರೆ ಕಾರಿನಲ್ಲಿ ಕಳುಹಿಸಿದರು. ಭದ್ರತಾ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದರು. ಎಂಜಿನ್ ಆಯಿಲ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ