ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುದರ್ಶನ ಯಾದವ್ (26) ಎಂದು ಗುರುತಿಸಲಾಗಿದೆ.
ಬಂಧಿತನ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದು, ಮತ್ತೊಂದೆಡೆ ಮೃತಳ ಶವದ ಮರಣೋತ್ತರ ಹೆಚ್ಚುವರಿ ಪರೀಕ್ಷೆಗೆ ಕಲಬುರಗಿಗೆ ದೇಹದ ಕೆಲ ಭಾಗದ ಮಾದರಿ ಕಳಿಸಿಕೊಡಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮಧು ಪತ್ತಾರ್ ಶವ ಅನುಮಾನಾಸ್ಪದ ರೀತಿಯಲ್ಲಿ ನಗರದ ಉಸುಕಿನ ಹುನುಮಾನ್ ದೇವಸ್ಥಾನದ ಬಳಿಯ ಗುಡ್ಡದಲ್ಲಿ ಸುಟ್ಟ ಗಾಯಗಳಿಂದ ಕೂಡಿದ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪೊಲೀಸರಿಗೆ ಪತ್ತೆಯಾಗಿತ್ತು. ಪೋಲೀಸರು ಇದನ್ನು ಆತ್ಮಹತ್ಯೆ ಕೇಸ್ ಎಂದು ದಾಖಲಿಸಿಕೊಂಡಿದ್ದು ಮೃತಳ ಪಾಲಕರು ಇದೊಂದು ಕೊಲೆ ಎಂದು ನೇತಾಜಿ ನಗರ ಠಾಣೆಗೆ ದೂರಿತ್ತಿದ್ದಾರೆ.
ಪ್ರಕರಣದ ವಿಚಾರಣೆ ಚುರುಕುಗೊಳಿಸಿರುವ ಪೊಲೀಸರು ಗುರುವಾರ ರಾತ್ರಿ ಶಂಕಿತ ಆರೋಪಿ ಸುದರ್ಶನ ಯಾದವ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನೆಟ್ಟಿಗರಿಂದ ಆಕ್ರೋಶ
ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅನುಮಾನಗಳು ವ್ಯಕ್ತವಾಗಿದ್ದರು, ಮಧು ಪತ್ತಾರ ಅನುಮಾನಸ್ಪದ ಸಾವನ್ನು ಮಾಧ್ಯಮ ನಿರ್ಲಕ್ಷಿಸುತ್ತಿದೆ ಎಂದು ಸಾಮಾಜಿಕ ತಾಣಗಳಲ್ಲಿ ನೆಟ್ಟಿನಗರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ