ಲಖನೌ: ಬಿಎಸ್‌ಪಿ ಮತ್ತು ಎಸ್‌ಪಿ ಕಾರ್ಯಕರ್ತರು ಕಾಂಗ್ರೆಸ್‌ಗೆ ಮತ ಹಾಕಬೇಕು ಎಂದು ಬಿಎಸ್‌ಪಿ ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಅಧಿಕೃತ ಸೂಚನೆ ನೀಡಿದ್ದಾರೆ.
ಮೇ 6ರ ಸೋಮವಾರ ದೇಶದಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ. ಅದರಲ್ಲಿ ಉತ್ತರ ಪ್ರದೇಶದ ಅಮೇಠಿ ಮತ್ತು ರಾಯಬರೇಲಿ ಕ್ಷೇತ್ರಗಳೂ ಸೇರಿವೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೆರಡೂ ಒಂದೇ. ಇಬ್ಬರೊಂದಿಗೂ ನಾವು ಮೈತ್ರಿ ಮಾಡಿಕೊಂಡಿಲ್ಲ. ಆದರೆ, ಬಿಜೆಪಿಯನ್ನು ಸೋಲಿಸಬೇಕು. ಅಮೇಠಿ ಮತ್ತು ರಾಯಬರೇಲಿಯಲ್ಲಿ ನಮ್ಮ ಮೈತ್ರಿ ಕೂಟ ಕಾಂಗ್ರೆಸ್‌ಗೆ ಮತ ಹಾಕಬೇಕು,’ ಎಂದು ಅವರು ಹೇಳಿದ್ದಾರೆ.
‘ಈ ಹಿಂದಿನ ನಾಲ್ಕು ಹಂತಗಳ ಮತದಾನದ ವೇಳೆ ಉತ್ತರ ಪ್ರದೇಶದಲ್ಲಿ ಜನತೆ ಎಸ್‌ಪಿ ಮತ್ತು ಬಿಎಸ್‌ಪಿಯನ್ನು ಬೆಂಬಲಿಸಿದ್ದಾರೆ. ಇದು ಬಿಜೆಪಿಯ ನಿದ್ದೆಗೆಡಿಸಿದೆ. ನಮ್ಮ ಮೈತ್ರಿಯಿಂದ ಕೇಂದ್ರದಲ್ಲಿ ಹೊಸ ಪ್ರಧಾನಿಯಷ್ಟೇ ಆಯ್ಕೆಯಾಗುವುದಿಲ್ಲ. ಬದಲಿಗೆ, ಉತ್ತರ ಪ್ರದೇಶಕ್ಕೆ ಹೊಸ ಸರ್ಕಾರ ಸಿಗುತ್ತದೆ,’ ಎಂದು ಅವರು ಹೇಳಿದ್ದಾರೆ.
ನಿರಂಕುಶ ಮತ್ತು ಅಹಂಕಾರಿ ಆಡಳಿತದಿಂದ ಮೇ.23ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಗಲಿದೆ ಎಂದೂ ಮಾಯಾವತಿ ಹೇಳಿದ್ದಾರೆ.
ಅಮೇಠಿ ಮತ್ತು ರಾಯಬರೇಲಿಗಳೆರಡೂ ಕಾಂಗ್ರೆಸ್‌ನ ಸಾಂಪ್ರದಾಯಿಕ ಕ್ಷೇತ್ರಗಳು. ಅದರಲ್ಲೂ ಗಾಂಧಿ ಕುಟುಂಬಕ್ಕೆ ನಿಷ್ಠೆ ಹೊಂದಿರುವ ಕ್ಷೇತ್ರಗಳು. ಅಮೇಠಿಯಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದರೆ, ರಾಯಬರೇಲಿಯಿಂದ ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಇಲ್ಲಿ ಮೇ 6 ರಂದು ಮತದಾನ ನಡೆಯಲಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ