ಹೊಸದಿಲ್ಲಿ, ಮೇ 17: ಮಹಾತ್ಮಾ ಗಾಂಧೀಜಿಯ ಹಂತಕ ನಾಥೂರಾಮ್ ಗೋಡ್ಸೆಯನ್ನು ಬೆಂಬಲಿಸಿ ಬಿಜೆಪಿ ಅಭ್ಯರ್ಥಿಗಳಾದ ಪ್ರಜ್ಞಾ ಸಿಂಗ್, ನಳಿನ್ ಕುಮಾರ್ ಮತ್ತು ಅನಂತ್ ಕುಮಾರ್ ಹೆಗಡೆ ನೀಡಿರುವ ಹೇಳಿಕೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ,ಈ ಮೂವರಿಂದಲೂ ಪಕ್ಷವು ವಿವರಣೆ ಕೋರಿದೆ, ಇದಕ್ಕಾಗಿ 10 ದಿನ ಕಾಲಾವಕಾಶ ನೀಡಲಾಗಿದೆ ಎಂದು ಪಕ್ಷದ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಕ್ಷದ ಅಧ್ಯಕ್ಷ ಅಮಿತ್ ಶಾ, “ಅನಂತ್ ಕುಮಾರ್ ಹೆಗಡೆ, ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ನಳಿನ್ ಕಟೀಲ್ ಅವರು ನೀಡಿರುವ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯಗಳಾಗಿವೆ. ಅವರ ಹೇಳಿಕೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.
“ಈ ಹೇಳಿಕೆಗಳಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಮೂವರೂ ಕ್ಷಮೆ ಯಾಚಿಸಿದ್ದಾರೆ. ಆದರೆ ಇದು ಪಕ್ಷದ ಸಿದ್ಧಾಂತದ ವಿರುದ್ಧವಾಗಿದೆ” ಎಂದವರು ಹೇಳಿದ್ದಾರೆ.