ಬೆಂಗಳೂರು, ಮೇ 29: ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷ, ಪ್ರಮುಖ ಅಂತರ್‌ರಾಷ್ಟ್ರೀಯ ಧಾರ್ಮಿಕ ವಿದ್ವಾಂಸ ಮೌಲಾನ ಮುಫ್ತಿ ಶಂಶುಲ್ ಹಖ್ ಖಾದ್ರಿ ಹಸನಿ ವಲ್ ಹುಸೈನಿ(87) ಬುಧವಾರ ಬೆಳಗ್ಗೆ 10 ಗಂಟೆಗೆ ನಗರದ ಕಾಟನ್ ಪೇಟೆಯಲ್ಲಿರುವ ಹಝ್ರತ್ ಲಕ್ಕಡ್ ಶಾ ದರ್ಗಾ ಆವರಣದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.
ದೇಶ, ವಿದೇಶಗಳಲ್ಲಿ ಅಪಾರ ಶಿಷ್ಯರನ್ನು ಹೊಂದಿರುವ ಶಂಶುಲ್ ಹಖ್, ಖಾದಿರಿಯ್ಯ ತ್ವರೀಖತ್‌ನ ಪ್ರಮುಖ ಶೈಖ್‌ಗಳಲ್ಲೊಬ್ಬರು. ಫಿಖ್ಹ್ ಶಾಸ್ತ್ರದಲ್ಲಿ ಅಗಾಧ ಪಾಂಡಿತ್ಯ ಹೊಂದಿದ್ದ ಇವರು ಕರ್ನಾಟಕದ ವಿವಿಧ ಧಾರ್ಮಿಕ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು.
ಶಂಶುಲ್ ಹಖ್ ಖಾದ್ರಿ ಅವರು ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಮುಸ್ಲಿಂ ಜಮಾಅತ್‌ನ ರಾಜ್ಯಾಧ್ಯಕ್ಷರಾಗಿದ್ದರು. ಯೂರೋಪ್, ಆಫ್ರಿಕಾಗಳಿಂದ ಆಗಮಿಸುವ ಪ್ರತಿನಿಧಿಗಳೊಂದಿಗೆ ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುತ್ತಿದ್ದ ಮೌಲಾನರಿಗೆ ಸಿಂಗಾಪುರ, ಮಲೇಶ್ಯಾಗಳಲ್ಲಿ ಸಾವಿರಾರು ಅಭಿಮಾನಿಗಳಿದ್ದಾರೆ.
ನಾಳೆ(ಮೇ 30) ಲುಹರ್ ನಮಾಝಿನ ನಂತರ ಅವರ ಪೀರ್ ಬೌಂಡರಿಯಲ್ಲಿ ಜನಾಝ ನಮಾಝ್ ನಡೆಯಲಿದೆ. ಬಳಿಕ ಚಾಮರಾಜ ಪೇಟೆಯ ರೋಯನ್ ಸರ್ಕಲ್ ನಲ್ಲಿರುವ ಅವರ ತಾತ ವಲಿಯುಲ್ಲಾಹಿ ಹಝ್ರತ್ ಮೀರ್ ಸುವಾದ್(ರ) ದರ್ಗಾದ ಪಕ್ಕದಲ್ಲಿ ಅವರ ದಫನ್ ನಡೆಯಲಿದೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ