ಬೆಂಗಳೂರು.ಜೂನ್,4:ಎಲ್ಲಾಕಡೆ ಮಂಗಳವಾರ ರಾತ್ರಿ ಚಂದ್ರ ದರ್ಶನವಾಗಿದ್ದು, ಬುಧವಾರ ರಾಜ್ಯಾದ್ಯಂತ ಈದ್ ಉಲ್ ಫಿತ್ರ್ ಆಚರಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಿನ ಜಾಮಿಯಾ ಮಸೀದಿಯ ಖತೀಬ್ ಮೌಲಾನಾ ಮೊಹಮದ್ ಮಸೂದ್ ಇಮ್ರಾನ್ ರಶ್ದಿ ತಿಳಿಸಿದ್ದಾರೆ.
ವಕ್ಫ್ ಬೋರ್ಡ್ ಕಚೇರಿಯಲ್ಲಿ ರಾಜ್ಯ ಚಂದ್ರದರ್ಶನ ಸಮಿತಿಯು ಮಂಗಳವಾರ ರಾತ್ರಿ ಸಭೆ ನಡೆಸಿತು. ರಾಜ್ಯದಲ್ಲಿ ಚಂದ್ರದರ್ಶನವಾಗಿರುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಬುಧವಾರವೇ ಈದುಲ್ ಫಿತ್ರ್ ಆಚರಿಸಲು ಧಾರ್ಮಿಕ ಮುಖಂಡರು ತೀರ್ಮಾನಿಸಿದ್ದಾರೆ ಎಂದು ಮಸೂದ್ ಇಮ್ರಾನ್ ರಶ್ದಿ ಅವರು ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್, ಕಾಂಗ್ರೆಸ್ ಮುಖಂಡ ಬಾವಾ ಹಾಗೂ ಮುಸಲ್ಮಾನ್ ಧರ್ಮದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
ಗಣ್ಯರ ಶುಭಾಶಯ:
ಬುಧವಾರ ರಂಜಾನ್ ಆಚರಣೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯೂ ಸೇರಿದಂತೆ ನಾಡಿನ ಹಿರಿಯ ಮುಖಂಡರು ಶುಭ ಕೋರಿದ್ದಾರೆ.
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು. ಶಾಂತಿ ಸೌಹಾರ್ದತೆಯ ಪ್ರತೀಕವಾದ ರಂಜಾನ್ ನಾಡಿನ ಜನತೆಗೆ ಸುಖ, ಸಮೃದ್ಧಿಯನ್ನು ತರಲಿ .















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ