ಬಾಗಲಕೋಟೆ(ಜೂನ್.08): ಕಮ್ಯುನಿಸ್ಟ್, ಕ್ರಿಶ್ಚಿಯನ್ ರಾಷ್ಟ್ರಗಳು ನರೇಂದ್ರ ಮೋದಿಯವರಿಗೆ ಭಾಯ್ ಅನ್ನುತ್ತಾರೆ. ಮುಸ್ಲಿಮರು ಇವತ್ತು ಭಾರತ್ ಮಾತಾಕಿ ಜೈ ಮತ್ತು ವಂದೇ ಮಾತರಂ ಎನ್ನುತ್ತಿದ್ದಾರೆ. ಈ ಮಧ್ಯೆ ಇನ್ನು ಕೆಲವರು ಪಾಕಿಸ್ತಾನ ಜಿಂದಾಬಾದ್ ಎನ್ನುವವವರೂ ಇದ್ದಾರೆ. ಅದೇ ವೇಳೆ ಮುಸ್ಲಿಂ ಮಹಿಳೆಯರೇ ನರೇಂದ್ರ ಮೋದಿ ಭಾಯ್ ಎಂದು ಮತ ನೀಡಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್ ಈಶ್ವರಪ್ಪ ತಮ್ಮ ಗೆಲುವನ್ನು ಕೊಂಡಾಡಿದರು.
ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತಾಡಿದ ಇವರು ಎಂದಿನಂತೆಯೇ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ ದೇವೆಗೌಡರು ಏನಂದ್ರು? ಒಕ್ಕಲಿಗರು ಜೆಡಿಎಸ್ಗೆ ಮತ ಹಾಕುತ್ತಾರೆ ಎಂದಿದ್ದರು. ಈಗ ನಿಖಿಲ್ ಎಲ್ಲಿದ್ದೀಯಪ್ಪಾ ಬದಲಿಗೆ ದೇವೇಗೌಡರೇ ಎಲ್ಲಿದಿರಪ್ಪಾ? ಎನ್ನುವಂತಹ ಪರಿಸ್ಥಿತಿ ಬಂದಿದೆ ಎಂದು ಕುಟುಕಿದ್ದಾರೆ.
ಇನ್ನು ಒಕ್ಕಲಿಗರು ಎಂದು ಸೊಲ್ಲೆತ್ತಬೇಡಿ. ಒಂದು ವೇಳೆ ಅದೇ ಸುದ್ದಿ ಮಾತಾಡಿದ್ರೆ ನಿಖಿಲ್ ಎಲ್ಲಿದಿಯಪ್ಪಾ ಅಷ್ಟೇ ಅಲ್ಲ, ದೇವೇಗೌಡರು ಎಲ್ಲಿದಿರಪ್ಪಾ? ಎನ್ನುವಂತಹ ಪರಿಸ್ಥಿತಿ ಮತ್ತೊಮ್ಮೆ ಬರುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯನವರೇ ರಾಜ್ಯದಲ್ಲಿ ಜಾತಿ ವಿಷಬೀಜ ಬಿತ್ತಿದ್ರು. ರಾಜ್ಯದ ಕುರುಬರೆಲ್ಲ ನಮ್ಮ ಜೊತೆ ಇದ್ದಾರೆ ಅಂದರು. ಇಂತವರಿಗೆ ಮೈಸೂರು, ಚಾಮುಂಡೇಶ್ವರಿ, ಅಷ್ಟೇ ಅಲ್ಲ ಬಾದಾಮಿಯಲ್ಲೂ ಬುದ್ದಿ ಕಲಿಸಿದ್ದಾರೆ ಎಂದು ಕೆ.ಎಸ್ ಈಶ್ವರಪ್ಪ ಕಿಡಿಕಾರಿದರು.
ಮೋದಿ ಪ್ರಧಾನಿ ಆದ ಬಳಿಕ ಕಾಂಗ್ರೆಸ್ ಶಾಸಕರಿಗೆ ಈ ರೀತಿ ಅನಿಸ್ತಿದೆ. ಸಿದ್ದರಾಮಯ್ಯ ದುರಹಂಕಾರಿ, ದಿನೇಶ್ ಗುಂಡೂರಾವ್ ಅಸಮರ್ಥ ನಾಯಕ ಎಂದು ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಕಿತ್ತೂರು ರಾಣಿ ಚೆನ್ನಮ್ಮನ ರಕ್ತ ನಮ್ಮದು ಎಂದು ಪ್ರಚಾರ ಮಾಡಿದ್ರು, ಏನೂ ಪ್ರಯೋಜನವಾಗಲಿಲ್ಲ. ಕೊನೆಗೆ ನಾವೇ ಅದೇ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅಭಿಮಾನದಿಂದ ದಿಗ್ವಿಜಯ ಸಾಧಿಸಿದೆವು ಎಂದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ