ಬೆಂಗಳೂರು: ಪಡಿತರ ಚೀಟಿದಾರ ಕುಟುಂಬದ ಸದಸ್ಯರ ಆಧಾರ್ ದೃಢೀಕರಣ (ಇ-ಕೆವೈಸಿ) ಮಾಡಿಕೊಳ್ಳುವುದನ್ನು ಜುಲೈ 15ರವರೆಗೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆದೇಶ ಹೊರಡಿಸಿದೆ.
ಈ ಹಿಂದೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸೂಚನೆ ನೀಡಿ, ಜುಲೈ 31ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದ ಸದಸ್ಯರಿಗೆ ಪಡಿತರ ವಿತರಣೆ ನಿಲ್ಲಿಸುವುದಾಗಿ ಆದೇಶಿಸಿತ್ತು ಆದರೆ ಈಗ ಇ-ಕೆವೈಸಿ ಮತ್ತು ಪಡಿತರ ವಿತರಣೆಯನ್ನು ಒಂದೇ ಸಮಯದಲ್ಲಿ ಮಾಡುತ್ತಿದ್ದ ಕಾರಣ ತಾಂತ್ರಿಕ ದೋಷ (ಸರ್ವರ್‌ಡೌನ್) ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಪದೇ ಪದೇ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗೆ ಬರಬೇಕಾಗಿತ್ತು.
ಹೀಗಾಗಿ ಇ-ಕೆವೈಸಿ ಅಥವಾ ಪಡಿತರ ವಿತರಣೆ ನಿಲ್ಲಿಸಿ ತಾಂತ್ರಿಕ ದೋಷದ ಸಮಸ್ಯೆ ಸರಿಪಡಿಸುವಂತೆ ರಾಜ್ಯ ಪಡಿತರ ವಿತರಕರ ಸಂಘದ ಸದಸ್ಯರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರಲ್ಲಿ ಮನವಿ ಮಾಡಿದ್ದರು ಈ ಹಿನ್ನಲೆಯಲ್ಲಿ ಆಯುಕ್ತರು ಇ-ಕೆವೈಸಿ ನೋಂದಣಿ ಮತ್ತು ಪಡಿತರ ವಿತರಣೆ ಅವಧಿಯಲ್ಲಿ ಬದಲಾವಣೆ ಮಾಡಿ ಆದೇಶಿಸಿದ್ದಾರೆ.
ಈ ನಡುವ ಆಹಾರ ಇಲಾಖೆಯ ಆಯುಕ್ತರ ನಿರ್ದೇಶನದಂತೆ ಕೂಡಲೇ ಇ-ಕೆವೈಸಿ ಸಂಗ್ರಹ ನಿಲ್ಲಿಸಬೇಕು. ಜೂನ್ ಮಾಹೆಯ ಪಡಿತರ ವಿತರಣೆಯನ್ನು ಅತ್ಯಂತ ತುರ್ತಾಗಿ ಮುಕ್ತಾಯ ಮಾಡಬೇಕು. ಎಲ್ಲ ನ್ಯಾಯ ಬೆಲೆ ಅಂಗಡಿಗಳ ಮುಂದೆ ಈ ಸೂಚನೆಯನ್ನು ಸಾರ್ವಜನಿಕರ ಗಮನಕ್ಕೆ ತರಲು ಬೋರ್ಡು ಹಾಕಬೇಕು ಎಂದು ಎಲ್ಲ ತಾಲೂಕಿನ ತಹಸೀಲ್ದಾರ ಮತ್ತು ಶಿರಸ್ತೇದಾರರು, ನಿರೀಕ್ಷಕರಿಗೆ ಸೂಚಿಸಲಾಗಿದೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ