ಬೆಂಗಳೂರು : ರೈಲಿನಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರೇ ಎಚ್ಚರ. ನೀವು ಸ್ವಲ್ಪ ಯಾಮಾರಿದರೂ ನಿಮ್ಮ ಪ್ರಜ್ಞೆ ತಪ್ಪಿಸಿ ಕಳ್ಳತನ ಮಾಡಿ ಬಿಡುತ್ತಾರೆ. ದೆಹಲಿಗೆ ಹೊರಟಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಹೀಗೊಂದು ಘಟನೆ ನಡೆದಿದ್ದು, ರೈಲ್ವೆ ಪೊಲೀಸರು ಪ್ರಯಾಣಿಕರ ಬಳಿ ಎಚ್ಚರಿಕೆಯಿಂದ ಇರುವಂತೆ ಕೋರಿದ್ದಾರೆ.
ಏಪ್ರಿಲ್ 19 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ನಾಲ್ವರು ಕಳ್ಳರು ಹತ್ತಿದ್ದರು. ಚಿನ್ನವನ್ನು ಯಾರು ಹೆಚ್ಚು ಧರಿಸಿದ್ದಾರೆ ಎಂಬುದನ್ನು ನೋಡಿ ಇವರು ಟಾರ್ಗೆಟ್ ಫಿಕ್ಸ್ ಮಾಡಿಕೊಳ್ಳುತ್ತಾರೆ. ಅದೇ ರೀತಿ ಕೆಆರ್ಪುರಂನಲ್ಲಿ ಹತ್ತಿದ್ದ ಇವರು 6 ಪ್ರಯಾಣಿಕರಿಗೆ ನಿದ್ರೆ ಬರುವ ಔಷಧಿ ಬೆರೆಸಿದ ಬಿಸ್ಕತ್ ಹಾಗೂ ತಂಪು ಪಾನಿಯಾ ನೀಡಿದ್ದರು. ಅವರು ಪ್ರಜ್ಞೆ ತಪ್ಪಿದ ನಂತರ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಚಿನ್ನಾಭರಣದ ಮೌಲ್ಯ 74 ಸಾವಿರ ರೂ. ಆಗಿತ್ತು ಎಂದು ತಿಳಿದು ಬಂದಿದೆ.
ರೈಲು ಸೊಲ್ಲಾಪುರ ಹೋದಾಗ 6 ಪ್ರಯಾಣಿಕರು ಪ್ರಜ್ಞೆ ತಪ್ಪಿದ್ದನ್ನು ರೈಲ್ವೆ ಸಿಬ್ಬಂದಿ ನೋಡಿದ್ದಾರೆ. ನಂತರ ಆ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ರೈಲ್ವೆ ಪೊಲೀಸರು ಏಪ್ರಿಲ್ 19ರಂದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಈಗ ಬೆಂಗಳೂರು ರೈಲ್ವೆ ಪೊಲೀಸರಿಗೆ ಕೇಸ್ ವರ್ಗಾವಣೆ ಮಾಡಲಾಗಿದೆ.
6 ಜನರು ಪ್ರಜ್ಞೆ ತಪ್ಪಿದರ ಹಿಂದಿನ ಕಾರಣವೇನು ಎಂಬುದು ಪೊಲೀಸರಿಗೆ ತಿಳಿದಿರಲಿಲ್ಲ. ಆದರೆ, ಈ ಪ್ರಯಾಣಿಕರು ನಡೆದ ಘಟನೆ ಬಗ್ಗೆ ಸಂಪೂರ್ಣವಾಗಿ ವಿವರಣೆ ನೀಡಿದ್ದರು. ಈ ಸಂಬಂಧ ಈಗ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್