ಪಣಜಿ, ಜುಲೈ.7 :- ಗೋವಾ ಮಾರ್ಗವಾಗಿ ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗವನ್ನು 11,000 ಕೋಟಿ ರೂ ವೆಚ್ಚದಲ್ಲಿ ವಿದ್ಯುದೀಕರಣಗೊಳಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಬಿಜೆಪಿ ಸದಸ್ಯತ್ವ ಅಭಿಯಾನ ಅಂಗವಾಗಿ ನಿನ್ನೆ ಇಲ್ಲಿ ಆಯೋಜಿಸಿದ್ದ ಸಮಾರಂಭದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂಬೈ-ಮಂಗಳೂರು ಮಾರ್ಗವನ್ನು ಈ ಯೋಜನೆಯಡಿ ಸಂಪೂರ್ಣ ವಿದ್ಯುದೀಕರಣಗೊಳಿಸಲಾಗುವುದು, ಇದರಿಂದ ರಮ್ಯ ಪ್ರಕೃತಿ ಸೊಬಗು ಇರುವ ಕೊಂಕಣ ರೈಲ್ವೆ ಮಾರ್ಗ ಮಾಲಿನ್ಯ ಮುಕ್ತಗೊಂಡು ವೇಗವೂ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ.
ವಿಶ್ವದಲ್ಲೇ ಅತ್ಯುತ್ತಮ ಸೇವೆ ಮತ್ತು ದರ್ಜೆಯನ್ನಾಗಿಸಲು ರೈಲ್ವೆ ವಲಯದಲ್ಲಿ 2030ರ ವೇಳೆಗೆ 50 ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಸರ್ಕಾರ ಉದ್ದೇಶಿಸಿದೆ. ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಕೈಗೊಳ್ಳಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಪ್ರವಾಸೋದ್ಯಮ ತಾಣವಾದ ಗೋವಾದಲ್ಲಿ ರೈಲು ಸಂಪರ್ಕ ವೃದ್ದಿಸಲು ಒತ್ತು ನೀಡಲಾಗಿದೆ. ಸಾಂಪ್ರದಾಯಿಕ ಹಳೆ ಬೋಗಿಗಳನ್ನು ಅತ್ಯಾಧುನಿಕ ಬೋಗಿಗಳೊಂದಿಗೆ ಬದಲಾಯಿಸುವ ಕಾರ್ಯ ವೇಗದಿಂದ ಸಾಗಿದೆ. ಮೇಕ್ ಇನ್ ಇಂಡಿಯಾ ಕಾರ್ಯಕ್ರಮದಡಿ ದೇಶೀಯವಾಗಿಯೇ ವಿಶ್ವದರ್ಜೆಯ ಬೋಗಿಗಳ ಉತ್ಪಾದನೆಯಾಗುತ್ತಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್