ನವದೆಹಲಿ: ‘ಆಧಾರ್ ಬಳಸಿಯೂ 50 ಸಾವಿರಕ್ಕಿಂತ ಅಧಿಕ ಮೊತ್ತದ ನಗದು ಪಡೆಯಬಹುದು ಅಥವಾ ಠೇವಣಿ ಇಡಬಹುದು’ ಎಂದು ರೆವಿನ್ಯೂ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ತಿಳಿಸಿದ್ದಾರೆ.
‘ಇನ್ನುಮುಂದೆ ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳು ನಗದು ವರ್ಗಾವಣೆಗೆ ಪಾನ್ ಬದಲಾಗಿ ಆಧಾರ್ ಅನ್ನು ಒಪ್ಪಿಕೊಳ್ಳುವಂತೆ ವ್ಯವಸ್ಥೆಯನ್ನು ಸಿದ್ಧಪಡಿಸಿಕೊಳ್ಳಲಿವೆ’ ಎಂದು ಹೇಳಿದ್ದಾರೆ.
ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆ ವಿವರ (ರಿಟರ್ನ್) ಸಲ್ಲಿಸಲು ಆಧಾರ್ ಬದಲಿಗೆ ಪಾನ್ ಅಥವಾ ಪಾನ್ ಬದಲಿಗೆ ಆಧಾರ್ ಬಳಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಇದರ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
‘ಕೆಲವರು ಪಾನ್ ಬಳಸಿದರೆ, ಕೆಲವರು ಆಧಾರ್ ಬಳಸುತ್ತಾರೆ. ಹೀಗಾಗಿ ಬ್ಯಾಂಕ್ಗಳು ಎರಡನ್ನೂ ಒಪ್ಪಿಕೊಳ್ಳಲು ಸಿದ್ಧವಿರಬೇಕು. ದೇಶದಲ್ಲಿ 41 ಕೋಟಿಗೂ ಅಧಿಕ ಪಾನ್ ಇದ್ದು ಅದರಲ್ಲಿ 22 ಕೋಟಿಯಷ್ಟನ್ನು ಆಧಾರ್ ಜತೆ ಜೋಡಿಸಲಾಗಿದೆ’ ಎಂದು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್