ಬೆಂಗಳೂರು: ಶುಕ್ರವಾರದಿಂದ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ.
ವಿಧಾನಸಭೆಯ ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ ವಿಪ್ ಜಾರಿ ಮಾಡಿದ್ದಾರೆ.
ಜೆಡಿಎಸ್ ಶಾಸಕರಿಗೂ ವಿಪ್ ಜಾರಿ ಮಾಡಲಾಗಿದೆ. ಶುಕ್ರವಾರದಿಂದ ವಿಧಾನಸಭಾ ಅಧಿವೇಶನ ಆರಂಭವಾಗಲಿದೆ. ಸದನದಲ್ಲಿ ಹಾಜರಿರಬೇಕು ಮತ್ತು ಸರಕಾರದ ಪರವಾಗಿ ಮತ ಚಲಾಯಿಸಬೇಕು. ಒಂದು ವೇಳೆ ಸದನಕ್ಕೆ ಗೈರು ಹಾಜರಾದರೆ ಹಾಗೂ ಹಾಜರಿದ್ದು ಸರಕಾರದ ವಿರುದ್ಧ ಮತ ಚಲಾಯಿಸಿದರೆ ಅನರ್ಹಗೊಳಿಸಲಾಗುವುದು ಎಂದು ವಿಪ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.
ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಶಾಸಕರು ಖುದ್ದಾಗಿ ಹಾಜರಾಗಿ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ರಾಜೀನಾಮೆ ಸಲ್ಲಿಸಿ ಮತ್ತೆ ಮುಂಬಯಿಗೆ ಪ್ರಯಾಣ ಬೆಳೆಸಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ನಡುವೆ ಅತೃಪ್ತ ಶಾಸಕರಿಗೆ ವಿಪ್ ಹೇಗೆ ನೀಡಲಾಗುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ರಾಜೀನಾಮೆ ಅಂಗೀಕಾರವಾಗದ ಕಾರಣ ಸದಸ್ಯತ್ವ ರದ್ದಾಗದು. ಆದ್ದರಿಂದ ಇವರಿಗೂ ವಿಪ್ ಅನ್ವಯವಾಗುತ್ತದೆ. ಹೀಗಾಗಿ ಅತೃಪ್ತ ಶಾಸಕರಿಗೆ ಅನರ್ಹತೆ ಭೀತಿ ಎದುರಾಗಿದೆ.
ಈ ನಡುವೆ ಶಾಸಕರ ಕೊಠಡಿಗೆ ವಿಪ್ ಅಂಟಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ