ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಸುರತ್ಕಲ್ ಟೋಲ್ ಗೇಟ್ನಲ್ಲಿ ಸ್ಥಳೀಯ ವಾಹನಗಳಿಂದಲೂ (ಕೆಎ- 19) ಟೋಲ್ ಸಂಗ್ರಹಿಸುವುದನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಗುತ್ತಿಗೆದಾರರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಮೂರು ದಿನಗಳ ಕಾಲ ತಡೆ ನೀಡಲಾಗಿದೆ.
ಮಂಗಳವಾರ ಬೆಳಿಗ್ಗೆಯಿಂದಲೇ ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹಕ್ಕೆ ಗುತ್ತಿಗೆದಾರರು ನಿರ್ಧರಿಸಿದ್ದರು. ಸ್ಥಳೀಯರ ವಿರೋಧ ಇದ್ದುದರಿಂದ ಪೊಲೀಸ್ ಭದ್ರತೆಯಲ್ಲಿ ಟೋಲ್ ಸಂಗ್ರಹಕ್ಕೆ ಸಿದ್ಧತೆ ಮಾಡಿಕೊಂಡಿದ್ದರು.
ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹ ಮಾಡದಂತೆ ಆಗ್ರಹಿಸಿತ್ತು. ಈ ಹಿಂದಿನ ತೀರ್ಮಾನದಂತೆ ಟೋಲ್ ಗೇಟ್ ತೆರವು ಮಾಡುವಂತೆ ಪಟ್ಟು ಹಿಡಿದಿದೆ. ಸೋಮವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗ ಪತ್ರ ಬರೆದಿದ್ದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹಿಸದಂತೆ ಗುತ್ತಿಗೆದಾರರಿಗೆ ಸೂಚಿಸಲು ಕೋರಿದ್ದರು. ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ತಡೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿಭಟನಾ ಸಭೆ: ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹ ವಿರೋಧಿಸಿ ಮತ್ತು ಸುರತ್ಕಲ್ ಟೋಲ್ ಗೇಟ್ ತೆರವು ಮಾಡುವಂತೆ ಆಗ್ರಹಿಸಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ಟೋಲ್ ಗೇಟ್ ಎದುರಿನಲ್ಲೇ ಪ್ರತಿಭಟನೆ ನಡೆಯಿತು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್