ಮಂಗಳೂರು: ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ, ಸಾವಿರ ಕೋಟಿ ಹಣ ಖರ್ಚು ಮಾಡಿದೆ ಎನ್ನುವುದನ್ನು ಜನರ ಮುಂದೆ ಒಪ್ಪಿಕೊಳ್ಳಲಿ ಎಂದು ಶಾಸಕ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು, ಪ್ರಜಾಪ್ರಭುತ್ವದ ತತ್ವಕ್ಕೆ ಅನುಗುಣವಾಗಿ ಆಯ್ಕೆಯಾದ ಸರ್ಕಾರವನ್ನು ಪತನ ಮಾಡಲಾಗಿದೆ. ಶಾಸಕರನ್ನು ಕೂಡಿಟ್ಟು, ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಬಿಜೆಪಿ ಮುಂದಾಗಿದೆ ಎಂದರು.
‘ಪ್ರತಿಯೊಬ್ಬ ಶಾಸಕರಿಗೆ ₹60 ರಿಂದ ₹70 ಕೋಟಿ ನೀಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ. ನೋಟು ರದ್ದತಿಯಿಂದ ಕಪ್ಪುಹಣ ಕಡಿಮೆಯಾಗಿದೆ ಎಂದು ಹೇಳುವ ಬಿಜೆಪಿ, ಶಾಸಕರಿಗೆ ನೀಡಿರುವ ಹಣ ಯಾವುದು ಎಂಬುದನ್ನು ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು.
ಜನತೆಗೆ ನೀಡಿರುವ ಮಾಹಿತಿ ಹಕ್ಕು ಕಾಯ್ದೆಯನ್ನು ತಿದ್ದುಪಡಿ ಮಾಡಿ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಎಂದು ದೂರಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್