ಮುಡಿಪು, ಜು 25: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಮುಡಿಪು ಡಿವಿಶನ್ ಇದರ ಅರ್ಧ ವಾರ್ಷಿಕ ಕೌನ್ಸಿಲ್ ಜುಲೈ 25 ರಂದು ಮಗ್ರಿಬ್ ನಮಾಝಿನ ಬಳಿಕ ಡಿವಿಶನ್ ಅಧ್ಯಕ್ಷರಾದ ತೌಸೀಫ್ ಸಅದಿ ಹರೇಕಳರವರ ಅಧ್ಯಕ್ಷತೆಯಲ್ಲಿ ಮುನವ್ವಿರುಲ್ ಇಸ್ಲಾಂ ಮದ್ರಸ ಹಾಲ್, ಮುಡಿಪುವಿನಲ್ಲಿ ನಡೆಯಿತು.

ದ. ಕ ಜಿಲ್ಲಾ ಕಾರ್ಯದರ್ಶಿ ಜಮಾಲುದ್ದೀನ್ ಸಖಾಫಿ ಮುದುಂಗಾರ್ ರವರು ಪ್ರಾರ್ಥನೆಗೆ ನೇತೃತ್ವ ನೀಡಿದರು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಡಿವಿಶನ್ ಪ್ರ.ಕಾರ್ಯದರ್ಶಿ ಇಲ್ಯಾಸ್ ಪೊಟ್ಟೋಳಿಕೆ ವರದಿಯನ್ನೂ, ಕೋಶಾಧಿಕಾರಿ ಶರೀಫ್ ಮುಡಿಪುರವರು ಲೆಕ್ಕಪತ್ರವನ್ನೂ, ಕ್ಯಾಂಪಸ್ ಕಾರ್ಯದರ್ಶಿ ಅಬೂಸ್ವಾಲಿಹ್ ಹರೇಕಳರವರು ಕ್ಯಾಂಪಸ್ ವರದಿಯನ್ನೂ ಸಭೆಯಲ್ಲಿ ಮಂಡಿಸಿದರು.
ವೀಕ್ಷಕರಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿಯಾದ ಮುಹಮ್ಮದ್ ಅಲಿ ತುಕ೯ಲಿಕೆ ಸಂಘಟನಾ ತರಗತಿಯನ್ನು ನಡೆಸಿದರು. ಜಿಲ್ಲಾ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿ ಸೆರ್ಕಳ ಆಶಂಸಾ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಡಿವಿಶನ್ ಉಪಾಧ್ಯಕ್ಷರಾದ ಇಬ್ರಾಹಿಂ ಅಹ್ಸನಿ ಮಂಜನಾಡಿ, ಕಾರ್ಯದರ್ಶಿಗಳಾದ ನೌಫಲ್ ಫರೀದ್ ನಗರ, ಮೊಯ್ದಿನ್ ಮೋರ್ಲ ಹಾಗೂ ಡಿವಿಶನ್ ನ ಎಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ಸೆಕ್ಟರ್ ನಿಂದ ಬಂದ ಡಿವಿಶನ್ ಕೌನ್ಸಿಲರ್ ಗಳು ಉಪಸ್ಥಿತರಿದ್ದರು.
ಡಿವಿಶನ್ ಪ್ರಧಾನ ಕಾರ್ಯದಶಿ೯ ಇಲ್ಯಾಸ್ ಪೊಟ್ಟೋಳಿಕೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು..















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ