ಉಳ್ಳಾಲ:ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ಇದರ ಅರ್ಧ ವಾರ್ಷಿಕ ಕೌನ್ಸಿಲ್ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಸಯ್ಯದ್ ಖುಬೈಬ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ತಾಜುಲ್ ಉಲಮಾ ಸುನ್ನಿ ಸೆಂಟರ್ ಮೇಲಂಗಡಿ ಉಳ್ಳಾಲದಲ್ಲಿ ನಡೆಯಿತು.

ಈ ಸಭೆಯನ್ನು ಎಸ್ಸೆಸ್ಸೆಫ್ ದ ಕ ಜಿಲ್ಲಾ ಅಧ್ಯಕ್ಷರಾದ ಇಬ್ರಾಹಿಮ್ ಸಖಾಫಿ ಸೆರ್ಕಳ ರವರು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಹಾಗೂ ದ ಕ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಮೊಹಮ್ಮದ್ ಅಲಿ ತುರ್ಕಳಿಕೆ ರವರು ಸಂಘಟನಾ ತರಗತಿ ನಡೆಸಿಕೊಟ್ಟರು.

ಡಿವಿಶನ್ ಮಹಾಸಭೆಯ ವೀಕ್ಷಕರಾಗಿ ಜಿಲ್ಲಾ ಉಪಾಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಯವರು ಆಗಮಿಸಿ ಅರ್ಧವಾರ್ಷಿಕ ಕೌನ್ಸಿಲ್ ನಡೆಸಿಕೊಟ್ಟರು.
ಡಿವಿಶನ್ ಅರ್ಧ ವಾರ್ಷಿಕ ವರದಿಯನ್ನು ಡಿವಿಶನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ತಲಪಾಡಿ ಯವರು ವಾಚಿಸಿದರು.
ಕ್ಯಾಂಪಸ್ ವರದಿ ಯನ್ನು ಡಿವಿಶನ್ ಕ್ಯಾಂಪಸ್ ಕಾರ್ಯದರ್ಶಿ ಅಲ್ತಾಫ್ ಕಲ್ಪಾದೆ ಯವರು ವಾಚಿಸಿದರು.
ಡಿವಿಶನ್ ಅಯವ್ಯಯವನ್ನು ಡಿವಿಶನ್ ಕೋಶಾದಿಕಾರಿ ಜಿ ಎ ಇಬ್ರಾಹಿಮ್ ಮಂಡಿಸಿದರು.
ಎಸ್ಸೆಸ್ಸೆಫ್ ರಾಜ್ಯ ನಾಯಕ ಮುಸ್ತಫಾ ಮಾಸ್ಟರ್ ಉಳ್ಳಾಲ ಸಂದೇಶ ಭಾಷಣ ಮಾಡಿದರು.
ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ಕಾರ್ಯದರ್ಶಿ ಶಿಹಾಬ್ ತಲಪಾಡಿ ಸ್ವಾಗತಿಸಿದರು, ಡಿವಿಶನ್ ಕಾರ್ಯದರ್ಶಿ ಜಾಫರ್ ಯು ಎಸ್ ರವರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ