ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡುವಲ್ಲಿ ಪಕ್ಷದ ಹೈಕಮಾಂಡ್ ಮಣಿದಿದೆ, ಆದರೆ 75 ವರ್ಷದ ಯಡಿಯೂರಪ್ಪ ಅವರನ್ನು ಸಿಎಂ ಮಾಡಿರುವ ಬಿಜೆಪಿಗೆ ಮುಜುಗರ ಉಂಟು ಮಾಡಿದೆ.
75 ವರ್ಷ ಮೇಲ್ಪಟ್ಟವರು ಚುನಾವಣೆಗೆ ಸ್ಪರ್ಧಿಸದಂತೆ ತನ್ನ ಪಕ್ಷದ ಹಿರಿಯ ನಾಯಕರಿಗೆ ಸೂಚನೆ ನೀಡಿತ್ತು. ಆದರೆ ಒಬ್ಬರಿಗೊಂದು ಮತ್ತೊಬ್ಬರಿಗೊಂದು ರೀತಿಯಲ್ಲಿ ಪಕ್ಷಪಾತ ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
75 ವರ್ಷ ಮೇಲ್ಪಟ್ಟವರು ಚುನಾವಣೆಗೆ ಸ್ಪರ್ಧಿಸದಂತೆ ಸೂಚನೆ ನೀಡಿದ್ದೀರಿ ಆದರೆ ಯಡಿಯೂರಪ್ಪ ನವರಿಗೆ ಹೇಗೆ ಸಿಎಂ ಮಾಡಿದಿರಿ ಎಂದು ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪ್ರಶ್ನೆ ಕೇಳಲಾಯಿತು, ಈ ವೇಳೆ ಉತ್ತರಿಸಲು ತಡಬಡಿಸಿದ ಜೆಪಿ ನಡ್ಡಾ ಸುಧಾರಿಸಿಕೊಂಡು ಪ್ರಶ್ನೆಗೆ ಉತ್ತರಿಸಿದರು.
ಯಡಿಯೂರಪ್ಪ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದವರು, ಹೀಗಾಗಿ ಸರ್ಕಾರ ರಚಿಸಲು ಅವರಿಗೆ ಅವಕಾಶ ನೀಡಲಾಗಿದೆ, ಹೀಗಾಗಿ ಬಿಜೆಪಿಯಿಂದ ಯಡಿಯೂರಪ್ಪನವರಿಗೆ ವಿನಾಯಿತಿ ನೀಡಲಾಗಿದೆ.
ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ ನಂತರ ಬಿಜೆಪಿ ತನ್ನ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿದೆ.,ವಯಸ್ಸಿನ ಮಿತಿಯನ್ನು ಬಿಜೆಪಿ ಎಲ್ಲಿಯೂ ಸಾಂವಿಧಾನಿಕವಾಗಿ ಲಿಖಿತ ರೂಪದಲ್ಲಿ ಜಾರಿಗೆ ತಂದಿರಲಿಲ್ಲ.
ವಯಸ್ಸಿನ ಮಿತಿ ಹೇರಿಕೆ ಮಾಡಿ, ಎಲ್,ಕೆ ಆಡ್ವಾಣಿ, ಮುರುಳಿ ಮನೋಹರ್ ಜೋಷಿ, ಸುಮಿತ್ರಾ ಮಹಾಜನ್, ಕೈರಾ ಮುಂಡಾ, ಶಾಂತಕುಮಾರ್, ಬಿ ಶಿ ಖಂಡೂರಿ, ಬಿಸಿ ಕೊಶೈರಿ ಮತ್ತು ಹುಕುಂ ದೇವ್ ನಾರಾಯಣ ಯಾದವ್ ಕಳೆದ ಲೋಕಸಭೆ ಚುನಾವಣೆ ಯಲ್ಲಿ ಸ್ಪರ್ಧಿಸಿರಲಿಲ್ಲ,ಇದರ ಜೊತೆಗೆ 75 ವರ್ಷ ದಾಟಿರುವ ನಜ್ಮಾ ಹೆಪ್ತುಲ್ಲಾ ಮತ್ತು ಕಲ್ರಾಜ್ ಮಿಶ್ರಾ ಅವರನ್ನು ಕೂಡ ಕೇಂದ್ರ ಸಂಪುಟದಿಂದ ಕೈ ಬಿಡಲಾಯಿತು. ಕರ್ನಾಟಕದಲ್ಲಿ ಸ್ಥಿರ ಹಾಗೂ ಸಮರ್ಥ ಸರ್ಕಾರ ನೀಡುವುದಾಗಿ ಜೆಪಿ ನಡ್ಡ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ