ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರೂಪಿಸಿರುವ ಹಣಕಾಸು ವಿಧೇಯಕವನ್ನು ಒಂದಕ್ಷರವೂ ಬದಲಾವಣೆ ಮಾಡದೇ ಸೋಮವಾರ ಮಂಡಿಸಿ, ಅಂಗೀಕರ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಭಾನುವಾರ ಘೋಷಿಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸ ‘ದವಳಗಿರಿ’ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ‘ಮೈತ್ರಿ ಸರ್ಕಾರದ ಹಣಕಾಸು ವಿಧೇಯಕವನ್ನು ಯಾವುದೇ ಬದಲಾವಣೆ ಇಲ್ಲದೇ ವಿಧಾನಸಭೆಯಲ್ಲಿ ಸೋಮವಾರ ಮಂಡಿಸುತ್ತೇವೆ. ಈ ಕುರಿತು ಈಗಾಗಲೇ ಸ್ಪೀಕರ್ಗೆ ತಿಳಿಸಿದ್ದೇವೆ,’ ಎಂದು ಅವರು ತಿಳಿಸಿದರು.
ಮೈತ್ರಿ ಸರ್ಕಾರದ ಹಣಕಾಸು ವಿಧೇಯಕವನ್ನೇ ಅಂಗೀಕರಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ವಿಶ್ವಾಸ ಮತ ಯಾಚನೆ ವೇಳೆ ಸದನದಲ್ಲಿ ಮನವಿ ಮಾಡಿದ್ದರು. ನಂತರ ವಿಶ್ವಾಸ ಮತ ಸೋತಿದ್ದ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಹಣಕಾಸು ವಿಧೇಯಕ ಅಂಗೀಕಾರಗೊಳ್ಳುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಅದರೆ, ಮೈತ್ರಿ ಸರ್ಕಾರವೇ ರೂಪಿಸಿದ್ದ ಹಣಕಾಸು ವಿಧೇಯಕವನ್ನೇ ಅಂಗೀಕರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧರಿಸಿದ್ದರು ಎನ್ನಲಾಗಿತ್ತು. ಅದರಂತೆ ಇಂದು ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ