ಬೆಂಗಳೂರು,(ಜು.30): ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ ಅವರು ಸ್ಪೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸ್ಫೀಕರ್ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಸ ವ್ಯಕ್ತಪಡಿಸಿದ್ದಾರೆ. “ನಮ್ಮ ವರಿಷ್ಠರು, ನಮ್ಮ ನಾಯಕರು ಎಲ್ಲರೂ ಸೇರಿ ನನ್ನನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ನಾನು ನಿಷ್ಠಾವಂತನಾಗಿ ಸ್ಪೀಕರ್ ಹುದ್ದೆಯಲ್ಲಿ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ,” ಎಂದು ಕಾಗೇರಿ ಹೇಳಿದ್ಧಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ