ಶ್ರೀನಗರ: ಜಮ್ಮುಕಾಶ್ಮೀರಕ್ಕೆ ಅನ್ವಯವಾಗಿದ್ದ ಸಂವಿಧಾನದ 370ನೇ ಪರಿಚ್ಛೇದವನ್ನು ಕೇಂದ್ರ ಸರ್ಕಾರ ರದ್ದು ಮಾಡಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತದ ಪ್ರಜಾಪ್ರಭುತ್ವದಲ್ಲಿ ಇಂದು ಕರಾಳ ದಿನವಾಗಿದೆ. ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದ್ದು ಕಾನೂನು ಬಾಹಿರ ಹಾಗೂ ಅಸಾಂವಿಧಾನಿಕ ಎಂದು ಕಿಡಿಕಾರಿದ್ದಾರೆ.
370 ಪರಿಚ್ಛೇದ ರದ್ದಾಗಿದ್ದರಿಂದ ಜಮ್ಮುಕಾಶ್ಮೀರದ ಮೇಲೆ ದುಷ್ಪರಿಣಾಮ ಬೀರಲಿದೆ. ಇಲ್ಲಿನ ಜನರನ್ನು ಭಯಭೀತಿಗೊಳಪಡಿಸುವ ಮೂಲಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡುವುದೇ ಕೇಂದ್ರ ಸರ್ಕಾರದ ಆಶಯ. ಕಾಶ್ಮೀರದ ವಿಚಾರದಲ್ಲಿ ಭಾರತ ತನ್ನ ನಿಲುವು ಉಳಿಸಿಕೊಳ್ಳಲು ವಿಫಲವಾಗಿದೆ ಎಂದಿದ್ದಾರೆ.
ಜಮ್ಮುಕಾಶ್ಮೀರವನ್ನು ಭಾರತಕ್ಕೆ ಸೇರಿಸಿಕೊಳ್ಳುತ್ತಿರುವ ಇವರು ಇಲ್ಲೇನು ಕೊಟ್ಟಿದ್ದಾರೆ? ವಿಶೇಷ ಸ್ಥಾನಮಾನ ನಮಗೆ ಕೊಟ್ಟ ಉಡುಗೊರೆಯಾಗಿತ್ತು. ಇದೇ ಸಂಸತ್ತು ನಮಗದನ್ನು ಕೊಟ್ಟಿತ್ತು. ಭಾರತ ಮತ್ತು ಜಮ್ಮುಕಾಶ್ಮೀರದ ನಾಯಕತ್ವದ ಮಧ್ಯೆ ಒಪ್ಪಂದವೊಂದು ಆಗಿತ್ತು. ಆದರೆ ಅದೇ ಒಪ್ಪಂದವನ್ನು ಇಂದು ಮುರಿಯಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಲವು ಮಾಧ್ಯಮಗಳು, ನಾಗರಿಕ ಸಮಾಜ ಈ ಬೆಳವಣಿಗೆಯನ್ನು ನೋಡಿ ಸಂತೋಷದಿಂದ ಸಂಭ್ರಮಿಸುತ್ತಿರುವುದು ನೋಡಿದರೆ ಅಸಹ್ಯವೆನಿಸುತ್ತದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಮುಸ್ಲಿಂ ಬಾಹುಳ್ಯದ ಏಕೈಕ ರಾಜ್ಯವನ್ನು ಬದಲಾವಣೆ ಮಾಡುತ್ತಿದೆ. ಮುಸ್ಲಿಮರು ಅವರದ್ದೇ ರಾಜ್ಯದಲ್ಲಿ ಎರಡನೇ ದರ್ಜೆಯ ಪ್ರಜೆಗಳಾಗಿ ಬದುಕುವ ಸ್ಥಿತಿಯನ್ನು ತರಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ