janadhvani

Kannada Online News Paper

ಯಾವುದೇ ಪ್ರಧಾನಿ ರಾಜ್ಯ ಮುಖ್ಯಮಂತ್ರಿಯನ್ನು ಈ ರೀತಿ ನಿರ್ಲಕ್ಷಿಸಿರಲಿಲ್ಲ- ಸಿದ್ದರಾಮಯ್ಯ

ಬೆಂಗಳೂರು: ಪ್ರವಾಹ ಪರಿಸ್ಥಿತಿ ಉಂಟಾಗಿ ಕೇಂದ್ರ ಸರಕಾರವು ರಾಜ್ಯಸರಕಾರವನ್ನು ನಿರ್ಲಕ್ಷಿಸಿರುವ ವಿರುದ್ದ ಮಾಜಿ ಸಿ.ಎಂ. ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ,
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು.ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ:

ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳನ್ನು ಈಗಿನ ಸರ್ಕಾರ ರದ್ದುಪಡಿಸುವ, ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ರಾಜ್ಯದ ಬಡಜನತೆ ದಂಗೆ ಏಳಬಹುದು, ಎಚ್ಚರ ಇರಲಿ. ಇಂತಹ ಜನವಿರೋಧಿ ನಿಲುವುಗಳನ್ನು ನಾವು ಸಹಿಸಿಕೊಳ್ಳುವವರಲ್ಲ, ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ ಎಂದು ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.