ದುಬೈ: ಪ್ರವಾಸೋದ್ಯಮ ಇಲಾಖೆ ಬಿಡುಗಡೆ ಮಾಡಿದ ಇತ್ತೀಚಿನ ಅಂಕಿ ಅಂಶಗಳ ಪ್ರಕಾರ, ಈ ವರ್ಷದ ಮೊದಲ ಆರು ತಿಂಗಳಲ್ಲಿ 83.6 ಲಕ್ಷ ಪ್ರವಾಸಿಗರು ದುಬೈಗೆ ಆಗಮಿಸಿದ್ದಾರೆ. ಇಲಾಖೆ ಬಿಡುಗಡೆ ಮಾಡಿದ ವರದಿಗಳ ಪ್ರಕಾರ, ಸಂದರ್ಶಕರ ಸಂಖ್ಯೆ ಹಿಂದಿನ ವರ್ಷಕ್ಕಿಂತ ಮೂರು ಶೇಕಡಾದಷ್ಟು ಹೆಚ್ಚಾಗಿದೆ. ಈ ವರ್ಷ ಅತಿ ಹೆಚ್ಚು ಸಂದರ್ಶಕರು ಭಾರತದಿಂದ (9,97,000)ಬಂದಿದ್ದು, ಸೌದಿ ಅರೇಬಿಯಾ ಎರಡನೇ (7,55,000) ಸ್ಥಾನದಲ್ಲಿದೆ. ಹಬ್ಬದ ರಜಾದಿನಗಳಲ್ಲಿ ಭೇಟಿ ನೀಡುವವರು ಶೇಕಡಾ 4.9 ರಷ್ಟು ಹೆಚ್ಚಾಗಿದ್ದಾರೆ.
ಯುಕೆ (5,86,000) ಮತ್ತು ಚೀನಾ (5,01,000) ಅತಿ ಹೆಚ್ಚು ಭೇಟಿ ನೀಡಿದ ದೇಶಗಳಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ. ಒಮಾನ್ನಿಂದ 499,000 ಸಂದರ್ಶಕರು ಆಗಮಿಸಿದ್ದಾರೆ. ವಿಸ ಆನ್ ಅರೈವಲ್ ವ್ಯವಸ್ಥೆಯು ಸಂದರ್ಶಕರ ಸಂಖ್ಯೆಯಲ್ಲಿ ಹೆಚ್ಚಾಗುವಂತೆ ಮಾಡಿದೆ ಎಂದು ದುಬೈ ಪ್ರವಾಸೋದ್ಯಮ ನಿರ್ದೇಶಕ ಹೆಲಾಲ್ ಸಯೀದ್ ಅಲ್ಮಾರಿ ಹೇಳಿದ್ದಾರೆ.
ದುಬೈನ ಹೋಟೆಲ್ ಉದ್ಯಮ ಕ್ಷೇತ್ರದ ಬೆಳವಣಿಗೆಯೂ ಹೆಚ್ಚಾಗಿದ್ದು, ಇದು ಕಳೆದ ವರ್ಷಕ್ಕಿಂತ ಐದು ಶೇಕಡಾ ಹೆಚ್ಚಳವಾಗಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ