janadhvani

Kannada Online News Paper

ಬಂದ್ಯೋಡು ರಸ್ತೆ ಅಪಘಾತ: ಮದನಿ ಅರಬಿಕ್ ಕಾಲೇಜ್ ವಿದ್ಯಾರ್ಥಿಗಳು ಗಂಭೀರ

ಉಪ್ಪಳ ಆ.22: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಉಳ್ಳಾಲ ಸಯ್ಯಿದ್ ಮದನಿ ಶರೀಅತ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಇಂದು ರಾತ್ರಿ 10 ಗಂಟೆ ಸುಮಾರಿಗೆ ಬಂದ್ಯೋಡ್ ಸಮೀಪ ಸಂಭವಿಸಿದೆ.

ಅರಾಫತ್, ಶಿಹಾನ್, ಜಾಫರ್ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಬಂದ್ಯೋಡ್‌ನ ಮಲ್ಲಂಗೈ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳು ಬಂದ್ಯೋಡ್ ಸಮೀಪ ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸಿ ಕಾರಿನಲ್ಲಿ ಉಳ್ಳಾಲದತ್ತ ಹಿಂದಿರುಗುತ್ತಿದ್ದ ವೇಳೆ ಕಾಸರಗೋಡಿನತ್ತ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿ ನಾಲ್ವರಿಗೂ ತೀವ್ರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಅವರನ್ನು ಬಂದ್ಯೋಡ್‌ನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.