ಅಬುಧಾಬಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಸಂಯುಕ್ತ ಅರಬ್ ಸಂಸ್ಥಾನದ (ಯುಎಇ) ಅತ್ಯುನ್ನತ ನಾಗರಿಕ ಪುರಷ್ಕಾರ ‘ಆರ್ಡರ್ ಆಫ್ ಝಾಯೆದ್’ ನೀಡಿ ಗೌರವಿಸಲಾಯಿತು.
ಯುಎಇಯ ರಾಜಕುಮಾರ ಮೊಹಮ್ಮದ್ ಬಿನ್ ಝಾಯಿದ್ ಆಲ್ ನಹ್ಯಾನ್ ಅವರು ಪ್ರಧಾನಿ ಮೋದಿ ಅವರಿಗೆ ಆರ್ಡರ್ ಆಫ್ ಝಾಯಿದ್ ನೀಡಿ ಗೌರವಿಸಿದ್ದಾರೆ. ಯುಎಇ ಸಂಸ್ಥಾಪಕರಾದ ನಹ್ಯಾನ್ ತಂದೆ ಶೇಜಕ್ ಜಾಯೆದ್ ಜನ್ಮದಿನ ಸ್ಮರಣಾರ್ಥವಾಗಿ ಈ ಪ್ರಶಸ್ತಿ ಸ್ಥಾಪಿಸಲಾಗಿದೆ.
ಈ ಬಾರಿಯ ‘ಆರ್ಡರ್ ಆಫ್ ಝಾಯಿದ್’ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿಲಾಗುತ್ತದೆ ಎಂದು ಯುಎಇ ಸರ್ಕಾರ ಇದೇ ವರ್ಷ ಏಪ್ರಿಲ್‍ನಲ್ಲಿ ತಿಳಿಸಿತ್ತು. ಈ ವೇಳೆ ಝಾಯಿದ್ ಮೆಡಲ್ ಪುರಸ್ಕಾರ ಕುರಿತು ಟ್ವೀಟ್ ಮಾಡಿದ್ದ ಯುಎಇಯ ರಾಜಕುಮಾರ, ಭಾರತದೊಂದಿಗೆ ಐತಿಹಾಸಿಕ ಹಾಗೂ ಸಮಗ್ರವಾದ ಕಾರ್ಯತಂತ್ರದ ಬಾಂಧವ್ಯ ಹೊಂದಿದ್ದೇವೆ. ಉಭಯ ದೇಶಗಳ ಸಂಬಂಧ ವೃದ್ಧಿಗೆ ನಮ್ಮ ಆತ್ಮೀಯ ಗೆಳೆಯರಾದ ಪ್ರಧಾನಿ ನರೇಂದ್ರ ಮೋದಿ ಉತ್ತೇಜನ ನೀಡಿದರು. ಅವರ ಈ ಪ್ರಯತ್ನಕ್ಕಾಗಿ ಝಾಯಿದ್ ಮೆಡಲ್ ನೀಡಿ ಗೌರವಿಸುತ್ತಿದೆ ಎಂದು ಹೇಳಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು 2015ರಲ್ಲಿ ಯುಎಇಗೆ ಭೇಟಿ ನೀಡಿದ್ದರು. ಈ ಮೂಲಕ ಉಭಯ ದೇಶಗಳ ಮಧ್ಯೆ ಉತ್ತಮ ಬಾಂಧವ್ಯ ಏರ್ಪಟ್ಟಿತ್ತು. ಬಳಿಕ ಯುಎಇ ಯುವರಾಜ ಮೊಹಮ್ಮದ್ ಬಿನ್ ಜಯೀದ್ ಅಲ್ ನಹ್ಯಾನ್ ಅವರು 2017ರಲ್ಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಇದಕ್ಕೂ ಮುನ್ನ 2016ರಲ್ಲಿ ಪ್ರಧಾನಿ ಮೋದಿ ಯುಎಇಗೆ ಭೇಟಿ ನೀಡಿದ್ದರು.
ಏನಿದು ಝಾಯಿದ್ ಮೆಡಲ್? ಯಾರಿಗೆ ನೀಡುತ್ತಾರೆ?:
ಸಂಯುಕ್ತ ಅರಬ್ ಸಂಸ್ಥಾನವು ಪ್ರತಿ ವರ್ಷವೂ ಝಾಯೆದ್ ಮೆಡಲ್ ಅನ್ನು ರಾಜರು, ಅಧ್ಯಕ್ಷರು ಹಾಗೂ ರಾಜ್ಯದ ಮುಖ್ಯಸ್ಥರಿಗೆ ನೀಡಿ ಗೌರವಿಸಲಾಗುತ್ತದೆ. ಈ ಪ್ರಶಸ್ತಿಯನ್ನು 1995ರಲ್ಲಿ ಮೊದಲ ಬಾರಿ ಜಪಾನ್ ಯುವರಾಜ ನರುಹಿಟೊ ಅವರಿಗೆ ನೀಡಲಾಗಿತ್ತು. 2007ರಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್, 2018ರಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರಿಗೆ ಈ ಗೌರವ ಸಿಕ್ಕಿತ್ತು. ಝಾಯೆದ್ ಮೆಡಲ್ ಪುರಸ್ಕಾರ ಪಡೆದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ.
ಪ್ರಧಾನಿ ಮೋದಿ ಅವರು ಸದ್ಯ ಮೂರು ದೇಶಗಳ ಪ್ರವಾಸ ಕೈಗೊಂಡಿದ್ದು, ಶುಕ್ರವಾರ ಫ್ರಾನ್ಸ್ ಗೆ ಭೇಟಿ ನೀಡಿ ಅಲ್ಲಿಂದ ಇಂದು ಯುಎಇಗೆ ಆಗಮಿಸಿದ್ದಾರೆ. ಈ ಮೂಲಕ ಯುಎಇಯಲ್ಲಿ ಎರಡು ದಿನದ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ, ರಾಜಕುಮಾರ್ ನಹ್ಯಾನ್ ಜೊತೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಪ್ರಾದೇಶಿಕ ಹಾಗೂ ಅಂತರಾಷ್ಟ್ರೀಯ ವಿಷಯಗಳ ಕುರಿತು ಇಬ್ಬರು ನಾಯಕರು ಸಮಾಲೋಚನೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ