ಚಿಕ್ಕಮಗಳೂರು (ಆ.30) : ಚಿಕ್ಕಮಗಳೂರಿನಿಂದ ಮಂಗಳೂರು, ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ಚಾರ್ಮಾಡಿ ಘಾಟಿ ಭಾರೀ ಮಳೆಯ ಕಾರಣದಿಂದ ಬಂದ್ ಆಗಿತ್ತು. ಬೆಳಿಗ್ಗೆ ವಾಹನ ಸಂಚಾರ ಆರಂಭವಾಗಿತ್ತು ಆದರೆ ಸಂಜೆ ಜಿಲ್ಲಾಧಿಕಾರಿಗಳು ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್ ಹಾಕಿದ್ದಾರೆ.
ಗುಡ್ಡ ಕುಸಿಯುವ ಸಾಧ್ಯತೆ ಇದೆ ಎನ್ನುವ ಪೊಲೀಸರ ವರದಿಯನ್ನು ಆಧರಿಸಿ ವಾಹನ ಸಂಚಾರಕ್ಕೆ ಚಾರ್ಮಾಡಿ ಘಾಟಿನಲ್ಲಿ ವಾಹನ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ಬ್ರೇಕ್ ಹಾಕಿದ್ದಾರೆ.
ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ,ಈ ಘಾಟಿನಲ್ಲಿ ಸಾಕಷ್ಟು ಕಡೆ ಗುಡ್ಡ ಕುಸಿದ ಕಾರಣ ಪ್ರಯಾಣಿಕರು ಸಂಚರಿಸುವುದು ಸೂಕ್ತವಲ್ಲ ಎಂದು ಜಿಲ್ಲಾಡಳಿತ ಸೆಪ್ಟೆಂಬರ್ 14 ರವರೆಗೆ ವಾಹನ ಸಂಚಾರ ನಿಷೇಧಿಸಿತ್ತು. ಆದರೆ, ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಿಗ್ಗೆ ಲಘು ವಾಹನಗಳಿಗೆ ಅವಕಾಶ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದರು.






