ದೋಹಾ: ಸಂಚಾರಿ ಕಾನೂನು ಉಲ್ಲಂಘನೆಗೆ ಹೊಸ ದಂಡ ಏರ್ಪಡಿಸಲಾದ ಬಗ್ಗೆ ವಾಟ್ಸ್ ಆ್ಯಪ್ನಲ್ಕಿ ಸುಳ್ಳು ಸುದ್ದಿ ಹರಡಲಾಗಿದೆ ಎಂದು ಖತರ್ ಸಂಚಾರ ಇಲಾಖೆ ಹೇಳಿದೆ. ಅಸ್ತಿತ್ವದಲ್ಲಿರುವ ದಂಡಗಳನ್ನು ಇನ್ನೂ ಹೆಚ್ಚಿಸಲಾಗಿದೆ ಮತ್ತು ಕೆಲವು ಹೊಸ ದಂಡಗಳನ್ನು ಹೇರಲಾಗಿದೆ ಎಂದು ವಾಟ್ಸ್ಆ್ಯಪ್ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಪ್ರಸಾರವಾಗುತ್ತಿರುವ ಚಿತ್ರ ನಕಲಿ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಸಂಚಾರ ಇಲಾಖೆ ಇದನ್ನು ಅಧಿಕೃತ ಟ್ವಿಟರ್ ಖಾತೆಯ ಮೂಲಕ ಪ್ರಕಟಿಸಿದೆ. ಅಧಿಕೃತವಲ್ಲದ ಮಾಧ್ಯಮಗಳ ಮೂಲಕ ಪಡೆದ ಮಾಹಿತಿಯನ್ನು ನಂಬಬಾರದು ಎಂದು ಅಧಿಕಾರಿಗಳು ಹೇಳಿದರು.
ಸಂಚಾರ ಇಲಾಖೆಯ ಹೆಸರಿನಲ್ಲಿ ದೇಶದ ಲೋಗೋ ವನ್ನು ಬಳಸಿಕೊಂಡು ವಾಟ್ಸ್ಆ್ಯಪ್ ಮೂಲಕ ಸುಳ್ಳು ಮಾಹಿತಿ ಹರಡಲಾಗಿದೆ. ಕಾರಿನಲ್ಲಿ ಜೋರಾಗಿ ಸಂಗೀತ ನುಡಿಸಿದರೆ 5,000 ರಿಯಾಲ್ ಮತ್ತು ಕಾರಿನಲ್ಲಿ ಧೂಮಪಾನ ಮಾಡಿದರೆ 2,000 ರಿಯಾಲ್ ದಂಡ ವಿಧಿಸಲಾಗುವುದು ಎನ್ನುವ ರೀತಿಯಲ್ಲಿ ಸುದ್ದಿ ಹರಡಲಾಗಿದ್ದು, ಇದನ್ನು ಅಧಿಕೃತಗೊಳಿಸಲು, ಖತರ್ ಆಂತರಿಕ ಸಚಿವಾಲಯ ಮತ್ತು ಸಂಚಾರ ಇಲಾಖೆಯ ಲೋಗೋವನ್ನು ಬಳಸಲಾಗಿದೆ.
ಸುದ್ದಿ ಖಾತರಿಪಡಿಸದೆ ವದಂತಿಗಳನ್ನು ಹರಡುವ ಬಗ್ಗೆ ಖತರ್ ಅಧಿಕಾರಿಗಳು ಹಲವಾರು ಬಾರಿ ಎಚ್ಚರಿಕೆ ನೀಡಿದ್ದಾರೆ. ನೀವು ಈ ರೀತಿಯ ಸುದ್ದಿಗಳನ್ನು ಸ್ವೀಕರಿಸಿದರೆ, ಅಧಿಕಾರಿಗಳನ್ನು ಸಂಪರ್ಕಿಸಬೇಕು ಅಥವಾ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪರಿಶೀಲಿಸಬೇಕು ಎಂದು ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ