ರಿಯಾದ್: ಸೌದಿಯಲ್ಲಿ ಆನ್‌ಲೈನ್ ಬ್ಯಾಂಕಿಂಗ್ ಮತ್ತು ಎಟಿಎಂ ವ್ಯವಹಾರ ಬಗ್ಗೆ ಬ್ಯಾಂಕುಗಳು ಗ್ರಾಹಕರಿಗೆ ಎಚ್ಚರಿಕೆ ನೀಡಿವೆ. ಹೆಚ್ಚುತ್ತಿರುವ ಆನ್‌ಲೈನ್ ಬ್ಯಾಂಕಿಂಗ್ ವಂಚನೆಗಳ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಬ್ಯಾಂಕ್‌ಗಳು ಭದ್ರತಾ ಎಚ್ಚರಿಕೆ ನೀಡಿದೆ.
ದೇಶದ ಬ್ಯಾಂಕಿಂಗ್ ಮಾಹಿತಿ ಮತ್ತು ಜಾಗೃತಿ ಸಮಿತಿಯು ಗ್ರಾಹಕರಿಗೆ ಸುರಕ್ಷತಾ ಎಚ್ಚರಿಕೆಯೊಂದಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದು, ಪ್ರಾಧಿಕಾರವು ಗ್ರಾಹಕರಿಗೆ ಆನ್‌ಲೈನ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಳಸುವಾಗ ಅಥವಾ ಎಟಿಎಂ ಕಾರ್ಡ್‌ಗಳ ಮೂಲಕ ವಹಿವಾಟು ನಡೆಸುವಾಗ ಅವರು ಪರಿಗಣಿಸಬೇಕಾದ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಒದಗಿಸುತ್ತದೆ.
ಇಂಟರ್ನೆಟ್ ಬ್ಯಾಂಕಿಂಗ್ ಬಳಕೆದಾರರು ತಮ್ಮ ಆನ್‌ಲೈನ್ ಪಾಸ್‌ವರ್ಡ್ ಅನ್ನು ಬಲಪಡಿಸಬೇಕು. ರಹಸ್ಯ ಕೋಡ್ ಮಾಹಿತಿಯನ್ನು ಇತರರೊಂದಿಗೆ ಯಾವುದೇ ರೀತಿಯಲ್ಲಿ ಹಂಚಿಕೊಳ್ಳಬೇಡಿ. ಸಾರ್ವಜನಿಕ ನೆಟ್‌ವರ್ಕ್ ಮೂಲಕ ಲಾಗ್ ಇನ್ ಮಾಡಬೇಡಿ. ಖಾಸಗಿ ಎಲೆಕ್ಟ್ರಾನಿಕ್ಸ್‌ನಲ್ಲಿ ಗೌಪ್ಯ ಮಾಹಿತಿಯನ್ನು ಉಳಿಸಬೇಡಿ. ಲಾಗಿನ್ ಮಾಡಲಾಗುವ ಡಿವೈಸ್ ಗಳಲ್ಲಿ ಸಾಕಷ್ಟು ಆಂಟಿ-ವೈರಸ್ಗಳಿವೆ ಎಂದು ಖಚಿತಪಡಿಸಿಕೊಳ್ಳಿ. ವಾರಕ್ಕೊಮ್ಮೆಯಾದರೂ ಖಾತೆಗಳನ್ನು ಪರಿಶೀಲಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಂತೆ ಬ್ಯಾಂಕಿಂಗ್ ಪ್ರಾಧಿಕಾರದ ಸಂದೇಶದಲ್ಲಿ ತಿಳಿಸಿದೆ.
ಎಟಿಎಂ ಕಾರ್ಡ್‌ಗಳ ಮೂಲಕ ವಹಿವಾಟು ನಡೆಸುವವರು ಬಲವಾದ ಪಿನ್ ಸಂಖ್ಯೆಯನ್ನು ಬಳಸಬೇಕು. ಕಡಿಮೆ ಮೊತ್ತವಾಗಿದ್ದರೂ ಸಹ ಒಟಿಪಿ ಕಡ್ಡಾಯಗೊಳಿಸಿ. ಕಾರ್ಡ್ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಸೇವ್ ಮಾಡಬೇಡಿ. ಎಟಿಎಂ ಗ್ರಾಹಕರಿಗೆ ಎಟಿಎಂ ಕಾರ್ಡ್ ನಕಲಿ ಮಾಡಲು ಯಾರಿಗೂ ಅವಕಾಶ ನೀಡಬೇಡಿ ಎಂಬ ಸಂದೇಶವಿದೆ. ಮೊಬೈಲ್ ಫೋನ್ ಮತ್ತು ಇಮೇಲ್‌ಗಳಲ್ಲಿನ ನಕಲಿ ಸಂದೇಶಗಳನ್ನು ಗುರುತಿಸಲು ಮತ್ತು ಅಧಿಕೃತ ಮಾಹಿತಿಯನ್ನು ನೇರವಾಗಿ ಬ್ಯಾಂಕುಗಳಿಗೆ ವರ್ಗಾಯಿಸಲು ಬ್ಯಾಂಕಿಂಗ್ ಪ್ರಾಧಿಕಾರ ಗ್ರಾಹಕರಿಗೆ ಸಲಹೆ ನೀಡಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ