ಮನಾಮ: ಬಹ್ರೈನ್‌ನ ದೇಶೀಕರಣದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಸರಕಾರದೊಂದಿಗೆ ಸಮನ್ವಯ ಸಾಧಿಸಲು ಸರ್ಕಾರಿ ಸಂಸ್ಥೆಗಳು ಜಂಟಿಯಾಗಿ ಕೆಲಸ ಮಾಡಲಿದೆ ಎಂದು ಕಾರ್ಮಿಕ ಮಾರುಕಟ್ಟೆ ನಿಯಂತ್ರಣ ಪ್ರಾಧಿಕಾರ ಹೇಳಿದೆ. ದೇಶದಲ್ಲಿ ಸ್ಥಳೀಯರ ಉದ್ಯೋಗಾವಕಾಶವು ಶೇಕಡಾ 30 ರಷ್ಟು ಹೆಚ್ಚಾಗಿದೆ ಎಂದು ಪ್ರಾಧಿಕಾರ ವ್ಯಕ್ತಪಡಿಸಿದೆ.
ಕಾರ್ಮಿಕ ಮಾರುಕಟ್ಟೆ ನಿಯಂತ್ರಣ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಉಸಾಮಾ ಬಿನ್ ಅಬ್ದುಲ್ಲಾ ಅಲ್-ಅಬ್ಸಿ ಮಾತನಾಡಿ, ಮೂಲ ನಿವಾಸಿಗಳಿಗೆ ಉದ್ಯೋಗವನ್ನು ಖಾತ್ರಿಪಡಿಸಿಕೊಳ್ಳಲು ಸರ್ಕಾರವು ವ್ಯವಸ್ಥೆಗಳ ಕಾರ್ಯವನ್ನು ಸುಧಾರಿಸಿದೆ. ಈ ನಿಟ್ಟಿನಲ್ಲಿ, ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಸಚಿವಾಲಯ, ‘ತಮ್ಕೀನ್’ ಕಾರ್ಮಿಕ ನಿಧಿ ಸೇರಿದಂತೆ ಎಲ್ಲಾ ಸರ್ಕಾರಿ ಸಚಿವಾಲಯಗಳು ಮತ್ತು ಏಜೆನ್ಸಿಗಳ ಸಹಭಾಗಿತ್ವದಲ್ಲಿ ಎಲ್ಎಂಆರ್ಎ ಕಾರ್ಯನಿರ್ವಹಿಸುತ್ತದೆ.
ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಪರಿಚಯಿಸುವ ಮೂಲಕ ಸರಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿನ ಸ್ಥಳೀಯ ಪದವೀಧರರು ಉದ್ಯೋಗ ಪಡೆಯುತ್ತಿದ್ದಾರೆ. ಕಾರ್ಮಿಕ ಸಚಿವಾಲಯದಲ್ಲಿ ನೋಂದಾಯಿತ ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಉಸಾಮಾ ಅಲ್-ಅಬ್ಸಿ ಹೇಳಿದರು.
ವಿವಿಧ ಉದ್ಯೋಗಗಳಲ್ಲಿ ಉಚಿತವಾಗಿ ತರಬೇತಿ ನೀಡುವ ಮೂಲಕ ಉತ್ತಮ ಉದ್ಯೋಗಾಕಾಂಕ್ಷಿಗಳನ್ನು ಸೃಷ್ಟಿಸುವಗೋಸ್ಕರ ಈ ತರಬೇತಿ ನಡೆಸಲಾಗಿದೆ ಎಂದು ಅವರು ಹೇಳಿದರು. ಗೊತ್ತುಪಡಿಸಿದ ಪ್ರದೇಶಗಳಲ್ಲಿ ದೇಶೀಯ ಉದ್ಯೋಗಾಕಾಂಕ್ಷಿಗಳು ಲಭಿಸದಿದ್ದಲ್ಲಿ ಮಾತ್ರ ವಿದೇಶಿ ಪ್ರಜೆಗಳಿಗೆ ಕೆಲಸದ ಪರವಾನಗಿ ಲಭ್ಯವಿದೆ ಎಂದು ಉಸಾಮಾ ಅಲ್-ಅಬ್ಸಿ ಹೇಳಿದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ