ನವದೆಹಲಿ,ಸೆ.2: ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ದೆಹಲಿಯಲ್ಲಿ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೂರನೇ ದಿನವೂ ಇ.ಡಿ. ಕಚೇರಿಗೆ ಹಾಜರಾಗಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ನಾಳೆ ಮತ್ತೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮೂರನೇ ದಿನದ ವಿಚಾರಣೆ ಪೂರ್ಣಗೊಳಿಸಿ ಇ.ಡಿ. ಕಚೇರಿಯಿಂದ ಹೊರಬಂದ ಡಿಕೆಶಿ ಸುದ್ದಿಗಾರರೊಂದಿಗೆ ಮಾತನಾಡಿ, ನಾಳೆ ಬೆಳಿಗ್ಗೆ 11 ಗಂಟೆಗೆ ಮತ್ತೆ ವಿಚಾರಣೆಗೆ ಕರೆದಿದ್ದಾರೆ. ವಿಚಾರಣೆಯಲ್ಲಿ ಏನೇನು ನಡೆಯಿತು ಎಂದು ಹೇಳಲು ಸಾಧ್ಯವಿಲ್ಲ. ಕಾನೂನು ರಚಿಸುವವರಾದ ನಾವು ಕಾನೂನು ಪಾಲಿಸಲೇಬೇಕಿದೆ. ನನ್ನ ಪ್ರಕರಣ ರಾಜಕೀಯಪ್ರೇರಿತ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ ಎಂದು ಹೇಳಿದರು.
ಡಿಕೆಶಿ ಅನುಕಂಪ ಗಿಟ್ಟಿಸಿಕೊಳ್ಳಲು ಅತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಗರಂ ಆದ ಡಿಕೆಶಿ, ನನಗೆ ಅನುಕಂಪ ಗಿಟ್ಟಿಸಿಕೊಳ್ಳಬೇಕಾದ ಅನಿವಾರ್ಯ ಇಲ್ಲ. ರಾಜಕಾರಣ ಮಾಡಲೇಬೇಕೆಂದು ಬಂದವನು ನಾನು ಎಂದು ಈಗಾಗಲೇ ಹೇಳಿದ್ದೇನೆ. ರಾಜಕೀಯವಾಗಿ ಏನೇ ಬಂದರೂ ಎದುರಿಸುತ್ತೇನೆ. ನಾನು ಯಾವುದಕ್ಕೂ ಹೆದರುವ ಮಗನಲ್ಲ. ಅಶ್ವತ್ಥ್ ನಾರಾಯಣ ಹೇಳಿಕೆ ಗಮನಿಸಿದ್ದೇನೆ. ಅವರಿಗೆ ಉತ್ತಮ ಅವಕಾಶ ಸಿಕ್ಕಿದೆ, ಯಶಸ್ವಿಯಾಗಲಿ. ರಾಜಕೀಯ ಬಿಟ್ಟು ವ್ಯಾಪಾರಿಯಾಗಲಿ ಎಂದು ಸಲಹೆ ನೀಡಿದ್ದಾರೆ. ಅವರು ಬಹಳ ದೊಡ್ಡವರು, ಅವರ ಸಲಹೆ ಸ್ವೀಕರಿಸುತ್ತೇವೆ ಎಂದು ವ್ಯಂಗ್ಯವಾಡಿದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ