ರಿಯಾದ್: ಸೌದಿಯಲ್ಲಿನ ಹೋಂ ಡೆಲಿವರಿ ವ್ಯವಸ್ಥೆ ಮತ್ತು ಹಾಸ್ಪಿಟಾಲಿಟಿ ವಲಯದಲ್ಲಿನ ಚಾಲನಾ ಉದ್ಯೋಗಗಳನ್ನು ಸ್ವದೇಶೀಕರಣ ಗೊಳಿಸಲಾಗುತ್ತಿವೆ. ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯವು ಈ ಬಗೆಗಿನ ಶಾಸನವನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದೆ. ಭಾರತೀಯರು ಸೇರಿದಂತೆ ಸಾವಿರಾರು ವಿದೇಶಿಯರು ಈ ವಲಯದಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ.
ದೇಶದ ಸಾರ್ವಜನಿಕ ಸಾರಿಗೆ ಪ್ರಾಧಿಕಾರದ ಸಹಯೋಗದೊಂದಿಗೆ ಈ ಯೋಜನೆಯನ್ನು ಜಾರಿಗೆ ತರಲಾಗುವುದು. ಸಾರ್ವಜನಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ಫವಾಜ್ ಅಲ್ ಸಹ್ಲಿ ಮಾತನಾಡಿ, ಆನ್‌ಲೈನ್ ಮೂಲಕ ಮತ್ತು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ನೇರವಾಗಿ ನಡೆಸುವ ವಿತರಣೆ, ಮತ್ತು ಹಾಸ್ಪಿಟಾಲಿಟಿ ವಲಯದಲ್ಲಿ ವಿತರಣಾ ವಾಹನ ಚಾಲನಾ ಉದ್ಯೋಗಗಳು ಸೇರಿದಂತೆ ಸ್ವದೇಶೀಕರಣಗೊಳಿಸಲು ಯೋಜನೆಗಳು ನಡೆಯುತ್ತಿವೆ ಎಂದರು.
ಅಂತಹ ವ್ಯವಸ್ಥೆಗಳಿಗೆ ಬಳಸುವ ವಾಹನಗಳನ್ನು ವಿದೇಶೀಯರು ಬಳಸಿದರೆ ಕಾನೂನಿನ ಉಲ್ಲಂಘನೆ ಎಂದು ಪರಿಗಣಿಸಬೇಕು ಎಂದು ಹೊಸ ಕಾನೂನು ಷರತ್ತು ವಿಧಿಸುತ್ತದೆ. ಹಾಸ್ಪಿಟಾಲಿಟಿ ವಲಯದಲ್ಲಿ ವಾಹನಗಳನ್ನು ತಲುಪಿಸಲು ಮತ್ತು ಹಿಂದಿರುಗಿಸಲು ವಿದೇಶಿ ಚಾಲಕರನ್ನು ಬಳಸಲಾಗುತ್ತದೆ. ಇದು ಡಿಸೆಂಬರ್ ವೇಳೆಗೆ ಕೊನೆಗೊಳ್ಳುತ್ತದೆ ಮತ್ತು ಬದಲಾಗಿ ಸ್ಥಳೀಯ ಜನರಿಗೆ ಮಾತ್ರ ಸೀಮಿತವಾಗಲಿದೆ ಎಂದು ಫವಾಜ್ ಅಲ್ ಸಹ್ಲಿ ಹೇಳಿದ್ದಾರೆ. ದೇಶದಲ್ಲಿ ಫುಡ್ ಹೋಮ್ ಡೆಲಿವರಿ ವಲಯದಲ್ಲೂ ಸ್ವದೇಶೀಕರಣ ಅನುಷ್ಠಾನದೊಂದಿಗೆ, ಸಾವಿರಾರು ಸಾಮಾನ್ಯ ಜನರು ಇತರ ಕೆಲಸ ಹುಡುಕಬೇಕಾಗುತ್ತದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು