ಬೆಂಗಳೂರು: ತನಿಖೆಗೆ ಸಹಕರಿಸುತ್ತಿಲ್ಲ ಎಂಬ ನೆಪವೊಡ್ಡಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ತಮ್ಮ ಹಿತಾಸಕ್ತಿಗಳಿಗೆ ಬಗ್ಗದ ಪ್ರತಿಪಕ್ಷದ ನಾಯಕರನ್ನು ಮಣಿಸಲು ಕೇಂದ್ರ ಸರ್ಕಾರ ವಿವಿಧ ಏಜೆನ್ಸಿಗಳನ್ನು ಅಕ್ರಮವಾಗಿ ಬಳಸುತ್ತಿರುವುದು ದೃಢಪಟ್ಟಿದೆ. ಹಬ್ಬದ ಆಚರಣೆಗೂ ಅವಕಾಶ ನೀಡದೆ 4ದಿನಗಳ ಕಾಲ ನಿರಂತರ ವಿಚಾರಣೆಗೆ ಒಳಪಟ್ಟ ಡಿ ಕೆ ಶಿವಕುಮಾರ್ ಅವರನ್ನು ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪದ ಮೇಲೆ ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ’ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ
ಡಿಕೆ ಶಿವಕುಮಾರ್ ಅವರ ನಿವಾಸ, ಕಚೇರಿಗಳ ಮೇಲೆ ಆಗಸ್ಟ್ 1, 2017ರಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಡಿಕೆಶಿಗೆ ಸೇರಿದ್ದ ಒಟ್ಟು 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಹೊಸದಿಲ್ಲಿಯ ಡಿಕೆಶಿ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ 8.9 ಕೋಟಿ ರೂ. ನಗದು ಪತ್ತೆಯಾಗಿತ್ತು.
ಡಿಕೆಶಿ ಬಂಧನ ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. ತಮ್ಮ ಆಕ್ರೋಶವನ್ನು ಟ್ವೀಟಿಸಿದ್ದಾರೆ.
ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ.
ಡಿಕೆಶಿ ಬಂಧನಕ್ಕೆ ಹಲವಾರು ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ